Homeಕರ್ನಾಟಕಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

- Advertisement -
- Advertisement -

ಆಂಧ್ರ ಪ್ರದೇಶದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸಾವಿಗೀಡಾದವರ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈವರೆಗೆ 29 ಮಂದಿ ಸಾವನ್ನಪ್ಪಿದ್ದು, 50 ಮಂದಿ ನಾಪತ್ತೆಯಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ಭಾನುವಾರ ವರದಿ ಮಾಡಿದೆ.

20,000 ಮಂದಿಯನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಚಿತ್ತೂರು, ನೆಲ್ಲೂರು, ಕಡಪ ಮತ್ತು ಅನಂತಪುರದಲ್ಲಿ ಭಾರಿ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಠಾತ್ ಪ್ರವಾಹಕ್ಕೆ ಜನರು ಸಿಲುಕಿದ್ದಾರೆ.

ಪ್ರವಾಹ ಪೀಡಿತ ರಾಜ್ಯದಲ್ಲಿ ಭಾರತೀಯ ವಾಯುಪಡೆ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಚಿತ್ತೂರು, ನೆಲ್ಲೂರು, ಕಡಪ ಮತ್ತು ಅನಂತಪುರದಲ್ಲಿ ಭಾರಿ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪೀಡಿತ ರಾಜ್ಯದಲ್ಲಿ ಭಾರತೀಯ ವಾಯುಪಡೆ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನೆಲ್ಲೂರು ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸುವ ವೇಳೆ ಕಾನ್‌ಸ್ಟೆಬಲ್ ಒಬ್ಬರು ಸಾವನ್ನಪ್ಪಿದ್ದಾರೆ. ಶನಿವಾರ ಆಂಧ್ರಪ್ರದೇಶ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 20,000ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭಾರೀ ಮಳೆಗೆ 1,500 ಮನೆಗಳಿಗೆ ಹಾನಿಯಾಗಿದ್ದು, ಬೆಳೆ ನಾಶವಾಗಿದೆ.

ತಲಾ 2,000 ರೂಪಾಯಿಗಳನ್ನು ಸಂತ್ರಸ್ತ ಕುಟುಂಬಗಳಿಗೆ ನೀಡುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಂತ್ರಸ್ತರಿಗೆ ಆಹಾರ ಮತ್ತು ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಜತೆಗೆ ಸಾಂಕ್ರಾಮಿಕ ರೋಗಗಳು ಉಂಟಾಗದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. “ಆಂಧ್ರಪ್ರದೇಶದಲ್ಲಿ ಪ್ರವಾಹವು ಗಂಭೀರ ಹಾನಿಯನ್ನುಂಟುಮಾಡಿದೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ. “ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ” ಎಂದು ರಾಹುಲ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜಗನ್‌ಮೋಹನ್‌‌ ರೆಡ್ಡಿ ಅವರೊಂದಿಗೆ ಮಾತನಾಡಿ ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದರು.


ಇದನ್ನೂ ಓದಿರಿ: ಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....