Homeಕರ್ನಾಟಕರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ರಾಜ್ಯದ 16 ಜಿಲ್ಲೆಗಳು ಪ್ರವಾಹ ಪೀಡಿತವಾಗಿವೆ. 20ಕ್ಕೂ ಅಧಿಕ‌ ಜನರು ಬಲಿಯಾಗಿದ್ದಾರೆ, ಸಾವಿರಾರು ಸಂಖ್ಯೆಯಲ್ಲಿ ಜಾನುವಾರುಗಳು ಸಾವನ್ನಪ್ಪಿವೆ, ಹಲವಾರು ಮನೆಗಳು ಕೊಚ್ಚಿಹೋಗಿವೆ, ಲಕ್ಷಾಂತರ ಎಕರೆ ಬೆಳೆ ನಷ್ಟವಾಗಿದೆ. ಹೀಗೆ ಇನ್ನು ಅನೇಕ ದುರಂತ ಸಂಭವಿಸಿದೆ. ಇಷ್ಟು ಭೀಕರ ಪ್ರವಾಹ ನಾನು ನನ್ನ ರಾಜಕೀಯ ಜೀವನದಲ್ಲೇ ಕಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗ ಮಳೆಯಿಂದಾಗಿ ತತ್ತರಿಸಿಹೋಗಿದ್ದು, ಅಲ್ಲಿನ ಜನಜೀವನ‌ ಅಸ್ತವ್ಯಸ್ತಗೊಂಡಿದೆ. ಕೇಂದ್ರ ಸರ್ಕಾರ ಇದನ್ನು ಈ ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ರಕ್ಷಣಾ ಕಾರ್ಯಕ್ಕೆ ನೀಡುವ ಅನುದಾನದ ಜೊತೆಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಹೆಚ್ಚುವರಿ ಅನುದಾನ ನೀಡಬೇಕು ಎಂದು ಆಗ್ರಹಿಸುತ್ತೇನೆ. ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿ ಜನ ಜಾನುವಾರುಗಳ ಪ್ರಾಣ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಸಂತ್ರಸ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಕಲ್ಪಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ನವಿಲುತೀರ್ಥ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾದ ಹಿನ್ನೆಲೆಯಲ್ಲಿ ಬಾದಾಮಿಯ 27 ಗ್ರಾಮಗಳು ಜಲಾವೃತಗೊಂಡಿವೆ. ತಾಲೂಕಿನಲ್ಲಿ ಹಲವು ಕಡೆ ಗಂಜಿಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿಕೊಳ್ಳುವಂತೆ ನನ್ನ ಮಗ ಯತೀಂದ್ರ ಅವರನ್ನು ಕಳುಹಿಸಿದ್ದೇನೆ. ಬಾದಾಮಿಯ ಶಾಸಕನಾಗಿರುವುದರಿಂದ ಕ್ಷೇತ್ರದ ಜನರು ನನ್ನ ಉಪಸ್ಥಿತಿ ಬಯಸುವುದು ಸಾಮಾನ್ಯ. ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನವೇ ಇಂತಹ ದುರ್ಘಟನೆ ಸಂಭವಿಸಿದ್ದರೆ ಖಂಡಿತಾ ಶಸ್ತ್ರಚಿಕಿತ್ಸೆಯನ್ನು ಸ್ವಲ್ಪ ದಿನಗಳ ಕಾಲ ಮುಂದೂಡುತ್ತಿದ್ದೆ ಎಂದು ಅಸಹಾಯಕತೆ ಪ್ರದರ್ಶಿಸಿದ್ದಾರೆ.

ಬಾದಾಮಿ ಒಂದೇ ಅಲ್ಲ, ಶಾಸಕಾಂಗ ಪಕ್ಷದ ನಾಯಕನಾಗಿ ರಾಜ್ಯದ ಎಲ್ಲ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಆದರೆ ವೈದ್ಯರು ನೀಡಿರುವ ಕೆಲ ಸೂಚನೆಗಳನ್ನು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ನೊಂದುಕೊಂಡು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...