Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...