Homeಮುಖಪುಟಅಸ್ಸಾಂನಲ್ಲಿ ಮತ್ತೆ ಪ್ರವಾಹ: 25 ಜಿಲ್ಲೆಗಳಲ್ಲಿ ಭಾರೀ ಮಳೆ, 24 ಜನರ ಸಾವು

ಅಸ್ಸಾಂನಲ್ಲಿ ಮತ್ತೆ ಪ್ರವಾಹ: 25 ಜಿಲ್ಲೆಗಳಲ್ಲಿ ಭಾರೀ ಮಳೆ, 24 ಜನರ ಸಾವು

ಪ್ರವಾಹದಿಂದಾಗಿ 12 ಸ್ಥಳಗಳಲ್ಲಿನ ಒಡ್ಡುಗಳಿಗೆ ಹಾನಿಯಾಗಿದೆ ಮತ್ತು ಎಂಟು ಪೀಡಿತ ಜಿಲ್ಲೆಗಳ 86 ರಸ್ತೆಗಳ ವಿಭಾಗಗಳು ಹಾನಿಗೀಡಾಗಿವೆ, ಕೊಚ್ಚಿ ಹೋಗಿವೆ ಅಥವಾ ಪ್ರವಾಹದಿಂದಾಗಿ ಮುಳುಗಿವೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 24 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಹಲವಾರು ಭಾಗಗಳಲ್ಲಿ ಸೋಮವಾರ ಮಳೆ ಮುಂದುವರಿದ ಕಾರಣ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಸಂಖ್ಯೆ ಒಟ್ಟು 33 ರಲ್ಲಿ 25 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಋತುವಿನಲ್ಲಿ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿದ್ದು, ಸೋಮವಾರದ ಪ್ರವಾಹದಿಂದಾಗಿ ಮತ್ತೆ ನಾಲ್ವರು ಅಸುನೀಗಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಪ್ರಕಾರ, ಬರಾಕ್ ಕಣಿವೆ ಹೊರತುಪಡಿಸಿ ರಾಜ್ಯದ ಹೆಚ್ಚಿನ ಭಾಗಗಳು 2,402 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಿವೆ. ಪ್ರವಾಹದಿಂದಾಗಿ ರಾಜ್ಯದಲ್ಲಿ 83,168 ಹೆಕ್ಟೇರ್ ಬೆಳೆ ಪ್ರದೇಶ ಮುಳುಗಡೆಯಾಗಿದೆ ಎನ್ನಲಾಗಿದೆ.

ಪ್ರವಾಹವು ರಾಜ್ಯದ ಎರಡು ರಾಷ್ಟ್ರೀಯ ಉದ್ಯಾನವನಗಳ ಮೇಲೂ ಪರಿಣಾಮ ಬೀರಿದೆ. ಕಾಜಿರಂಗದಲ್ಲಿ ಅರಣ್ಯ ಸಿಬ್ಬಂದಿ ಬಳಸುವ ಒಟ್ಟು 203 ಶಿಬಿರಗಳಲ್ಲಿ 146 ಬಾಧಿತವಾಗಿದೆ. ಒರಾಂಗ್‌ನಲ್ಲಿ ಒಟ್ಟು 40 ಶಿಬಿರಗಳಲ್ಲಿ 22 ಪ್ರವಾಹಕ್ಕೆ ಒಳಗಾಗಿವೆ ಎಂದು ಎಎಸ್ಡಿಎಂಎ ತಿಳಿಸಿದೆ.

ಪ್ರವಾಹದಿಂದಾಗಿ 12 ಸ್ಥಳಗಳಲ್ಲಿನ ಒಡ್ಡುಗಳಿಗೆ ಹಾನಿಯಾಗಿದೆ ಮತ್ತು ಎಂಟು ಪೀಡಿತ ಜಿಲ್ಲೆಗಳ 86 ರಸ್ತೆಗಳ ವಿಭಾಗಗಳು ಹಾನಿಗೀಡಾಗಿವೆ, ಕೊಚ್ಚಿ ಹೋಗಿವೆ ಅಥವಾ ಪ್ರವಾಹದಿಂದಾಗಿ ಮುಳುಗಿವೆ ಎನ್ನಲಾಗಿದೆ.

ಬಿಹಾರ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಂಗಾಳದ ಹಲವು ಕಡೆ ಹಾಗೂ ಸಿಕ್ಕಿಂನಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಸ್ಸಾಂ ರಾಜ್ಯದ 25 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಈಗಾಗಲೇ ಇಲ್ಲಿನ 13.16 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ 273 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.


ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...