Homeಕರ್ನಾಟಕಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇಧ ವಿರೋಧಿಸಿ ನಾಳೆ ಪ್ರತಿಭಟನೆ

ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇಧ ವಿರೋಧಿಸಿ ನಾಳೆ ಪ್ರತಿಭಟನೆ

- Advertisement -
- Advertisement -

ಸರ್ಕಾರ ಏರ್ಪಡಿಸುವ ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧದ ಆದೇಶವನ್ನು ಹಿಂತೆಗುಕೊಳ್ಳುವಂತೆ ಆಗ್ರಹಿಸಿ ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ಗುರುವಾರ (ಆಗಸ್ಟ್‌ 12) ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ಗುರುವಾರ ಆಗಸ್ಟ್‌ 12 ರಂದು ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ. ಈ ಆದೇಶವನ್ನು ತಕ್ಷಣ ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌, ನಿರ್ದೇಶಕರಾದ ಶ್ರೀಕಾಂತ್‌ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರು ಮತ್ತು ಮಾರಾಟಗಾರರ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು ಬೆಳಿಗ್ಗೆ 11.15 ಕ್ಕೆ ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಪ್ರಕರಣೆಯಲ್ಲಿ ತಿಳಿಸಲಾಗಿದೆ.

ಇತ್ತ ಸರ್ಕಾರ ಹೊರಡಿಸಿರುವ ಆದೇಶದ ಬೆನ್ನಲ್ಲೇ ಬಿಬಿಎಂಪಿಯೂ ಇದೇ ಕ್ರಮವನ್ನು ಅನುಸರಿಸಿದೆ. ಇನ್ನು ಮುಂದೆ ನಡೆಯುವ ಸಭೆ ಸಮಾರಮಭಗಳಿಗೆ ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧಿಸಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ಆಕ್ರೋಶ, ಕ್ಷಮೆ ಕೇಳಿದ ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...