Homeಕರ್ನಾಟಕಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ನಿರಂತರ ಚುನಾವಣಾ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರಂತರ ಪ್ರವಾಸ ಮಾಡಿದ್ದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ, “ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ” ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಚ್‌.ಡಿ ಕುಮಾರಸ್ವಾಮಿಯವರು ಕಳೆದ ನಾಲ್ಕೈದು ತಿಂಗಳಿಂದ ನಿರಂತರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಪಂಚರತ್ನ ಯಾತ್ರೆ ಕೈಗೊಂಡಿದ್ದ ಎಚ್‌.ಡಿ ಕುಮಾರಸ್ವಾಮಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭೇಟಿ ನೀಡಿ ಜೆಡಿಎಸ್‌ ಪರ ಮತಯಾಚನೆ ಮಾಡಿದ್ದಾರೆ. ಒಂದು ತಿಂಗಳಿನಿಂದ ಬಿಸಿಲಿನಲ್ಲೇ ನಿರಂತರ ಪ್ರಚಾರ ನಡೆಸುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

ಕುಮಾರಸ್ವಾಮಿ ಶುಕ್ರವಾರ ಹಾಸನದಲ್ಲಿ ಎಚ್‌.ಡಿ.ರೇವಣ್ಣ, ಎ.ಮಂಜು, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜೊತೆ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪರ ಭರ್ಜರಿ ಪ್ರಚಾರ ನಡೆಸಿದ್ದರು.

ಶನಿವಾರ ರಾಮನಗರದಲ್ಲಿ ಜೆಡಿಎಸ್‌ ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ ರಾಮನಗರ ಪ್ರಚಾರ ರದ್ದುಗೊಳಿಸಿದ್ದರು.

ಇದನ್ನೂ ಓದಿರಿ: ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...