Homeಕರೋನಾ ತಲ್ಲಣ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ - ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

- Advertisement -
- Advertisement -

ಒಕ್ಕೂಟ ಸರ್ಕಾರದ ಆಡಳಿತಾರೂಢ ಬಿಜೆಪಿ ಪಕ್ಷವು ತನ್ನ ‘ಬ್ಲೂ ಟಿಕ್’ ಬ್ಯಾಡ್ಜ್‌ಗಾಗಿ ಟ್ವಿಟ್ಟರ್ ಜೊತೆ ಹೋರಾಡುವ ಬದಲು ಕೊರೊನಾ ವಿರುದ್ಧ ನಾಗರಿಕರಿಗೆ ಲಸಿಕೆ ಹಾಕುವ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಮಹಾರಾಷ್ಟ್ರ ಸಚಿವ, ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ವಕ್ತಾರ ನವಾಬ್‌ ಮಲಿಕ್ ಸೋಮವಾರ ಹೇಳಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರ ವೈಯಕ್ತಿಕ ಖಾತೆಗಳ ‘ಬ್ಲೂ ಟಿಕ್’ ಅನ್ನು ಟ್ವಿಟರ್ ತೆಗೆದು ಹಾಕಿತ್ತು ಮತ್ತು ನಂತರ ಅದನ್ನು ಮರು ಸ್ಥಾಪಿಸಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತವಾದ ಕೆಲವೇ ದಿನಗಳ ನಂತರ ನವಾಬ್ ಮಲಿಕ್‌ ಸುದ್ದಿಗಾರರೊಂದಿಗೆ ಮಾತನಾಡಿ ಒಕ್ಕೂಟ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಬ್ಲೂಟಿಕ್ ತೆಗೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ವಿಟರ್‌, “ಬ್ಲೂಟಿಕ್‌ ಬ್ಯಾಡ್ಜ್ ಇರುವ ಟ್ವಿಟರ್‌ ಖಾತೆಯು ಆರು ತಿಂಗಳವರೆಗೆ ನಿಷ್ಕ್ರಿಯವಾಗಿದ್ದರೆ ಅಥವಾ ಅದರ ಪರಿಶೀಲನೆಯು ಅಪೂರ್ಣವಾಗಿದ್ದರೆ ಅದು ಸ್ವಯಂಚಾಲಿತವಾಗಿ ತೆಗೆದುಹಾಕಬಹುದು” ಎಂದು ಹೇಳಿತ್ತು.

ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

‘ಬ್ಲೂ ಟಿಕ್’ ವಿಷಯದ ಬಗ್ಗೆ ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಟ್ವಿಟ್ಟರ್ ಜೊತೆ ಹೋರಾಡುತ್ತಿರುವಾಗ, ದೇಶದ ನಾಗರಿಕರು ಕೊರೊನಾ ವಿರುದ್ಧ ಲಸಿಕೆ ಹಾಕಲು ಹೋರಾಡುತ್ತಿದ್ದಾರೆ ಎಂದು ನವಾಬ್‌ ಮಲಿಕ್ ಸೋಮವಾರ ಹೇಳಿದ್ದಾರೆ.

“ಇದು ಬ್ಲೂಟಿಕ್‌‌ ಆಗಿರಲಿ ಅಥವಾ ವ್ಯಾಕ್ಸಿನೇಷನ್ ವಿಷಯವಾಗಿರಲಿ ಒಕ್ಕೂಟ ಸರ್ಕಾರವನ್ನು ಟೀಕಿಸಲಾಗುತ್ತಿದೆ. ಆದರೆ ಒಕ್ಕೂಟ ಸರ್ಕಾರವು ಟೀಕೆಗಳನ್ನು ನಿರ್ಲಕ್ಷಿಸುತ್ತಾ ತನ್ನ ದುರಹಂಕಾರ ಪ್ರದರ್ಶಿಸುತ್ತಿದೆ. ಟ್ವಿಟರ್‌ನೊಂದಿಗೆ ಬ್ಲೂಟಿಕ್‌‌ ವಿರುದ್ಧ ಹೋರಾಡುವ ಬದಲು ನಾಗರಿಕರಿಗೆ ಲಸಿಕೆ ಹಾಕುವಲ್ಲಿ ಬಿಜೆಪಿ ಹೆಚ್ಚು ಗಮನ ಹರಿಸಬೇಕು” ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ನವಾಬ್‌ ಮಲಿಕ್‌, “ಜನರು ಕೊರೊನಾ ತಡೆಗಟ್ಟುವ ಮಾನದಂಡಗಳನ್ನು ಅನುಸರಿಸಿದರೆ, ಇಡೀ ಮಹಾರಾಷ್ಟ್ರವು ಲಾಕ್‌ಡೌನ್‌ ನಿರ್ಬಂಧಗಳಿಂದ ಹೊರಬರುತ್ತದೆ” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಸಿಪಿ, ಕಾಂಗ್ರೆಸ್‌ ಮತ್ತು ಶಿವಸೇನೆಯ ಆಡಳಿತವಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...