Homeಮುಖಪುಟಮೇವು ಹಗರಣದ 5ನೇ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು

ಮೇವು ಹಗರಣದ 5ನೇ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು

- Advertisement -
- Advertisement -

ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಕಳೆದ ವಾರ ಈ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನಿಗೆ ಶಿಕ್ಷೆ ವಿಧಿಸಲಾಗಿತ್ತು. 1990ರ ದಶಕದಲ್ಲಿ ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ನಡೆದ ಮೇವು ಹಗರಣದಲ್ಲಿ ಡೊರಾಂಡಾ ಖಜಾನೆಯಿಂದ 139.5 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.

ಜಾಮೀನಿನ ಮೇಲೆ ಹೊರಬಂದು ಅಸ್ವಸ್ಥರಾಗಿರುವ ಲಾಲು ಪ್ರಸಾದ್ ಯಾದವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಶಿಕ್ಷೆಯ ಪ್ರಮಾಣದ ಬಗ್ಗೆ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯ ಶಿಕ್ಷೆಯನ್ನು ಘೋಷಿಸಿದೆ.

ಇದನ್ನೂ ಓದಿ: ಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

 

ಫೆಬ್ರವರಿ 15 ರಂದು ಅವರನ್ನು ದೋಷಿ ಎಂದು ಘೋಷಿಸಲಾಗಿತ್ತು. ಇಂದು ಶಿಕ್ಷೆಯ ಪ್ರಮಾಣ ಘೋಷಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ 73 ವರ್ಷದ ಲಾಲು ಪ್ರಸಾದ್ ಯಾದವ್ ಅವರನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಬಳಿಕ ಅವರನ್ನು ರಾಂಚಿಯ ಸರ್ಕಾರಿ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ಸ್ಥಳಾಂತರಿಸಲಾಗಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣವು ಪಾಟ್ನಾದ ಸಿಬಿಐ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದೆ.

950 ಕೋಟಿ ರೂಪಾಯಿ ಮೇವು ಹಗರಣವು ದೊಡ್ಡ ಪ್ರಮಾಣದ ಭ್ರಷ್ಟಾಚಾರವನ್ನು ಒಳಗೊಂಡಿತ್ತು. ಇದರಲ್ಲಿ ಪ್ರಾಣಿಗಳ ಮೇವಿಗೆ ಮೀಸಲಾದ ಹಣವನ್ನು ಬಿಹಾರದಾದ್ಯಂತ ಅನೇಕ ಸರ್ಕಾರಿ ಖಜಾನೆಗಳಿಂದ ದುರುಪಯೋಗಪಡಿಸಲಾಯಿತು. ಪಶು ಸಂಗೋಪನಾ ಇಲಾಖೆಯು ನಕಲಿ ಬಿಲ್ ನೀಡಿ ವಂಚನೆಗೆ ಅನುಕೂಲ ಮಾಡಿಕೊಡಲಾಗಿದೆ ಎನ್ನಲಾಗಿದೆ.

ಡಿಸೆಂಬರ್ 2017 ರಿಂದ ಜೈಲಿನಲ್ಲಿರುವ ಅವರು ತಮ್ಮ ಹೆಚ್ಚಿನ ಶಿಕ್ಷೆಯನ್ನು ಜಾರ್ಖಂಡ್‌ನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ  ಅನುಭವಿಸಿದ್ದಾರೆ. ಕಳೆದ ವರ್ಷ ಜನವರಿಯಲ್ಲಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಕರೆತರಲಾಗಿತ್ತು.


ಇದನ್ನೂ ಓದಿ: ಲೀಟರ್‌ ಪೆಟ್ರೋಲ್ ಮೇಲೆ 50 ರೂ ಕಡಿತ ಮಾಡಲಿ: ಲಾಲು ಪ್ರಸಾದ್ ಯಾದವ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...