Homeಮುಖಪುಟ2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

- Advertisement -
- Advertisement -

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು. 2023ರ ಚುನಾವಣೆಯಲ್ಲಿ ಆ 17 ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ..

1. ಗೋಕಾಕ್: ರಮೇಶ್ ಜಾರಕಿಹೊಳಿ – ಗೆಲುವು

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರು. ಆನಂತರ ನಡೆದ ಉಪಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಹಾಂತೇಶ್ ಕಡಾಡಿ, ಜೆಡಿಎಸ್‌ನಿಂದ ಚನ್ನಬಸಪ್ಪ ಬಾಳಪ್ಪ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಮೇಶ್ ಜಾರಕಿಹೊಳಿ ಗೆಲುವು ಕಂಡರು.

2. ಅಥಣಿ: ಮಹೇಶ್ ಕುಮಟಳ್ಳಿ – ಸೋಲು

2018ರಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಗೆದ್ದಿದ್ದ ಕಾಂಗ್ರೆಸ್ ಪಕ್ಷದ ಮಹೇಶ್ ಕುಮಟಳ್ಳಿ ಸಹ ರಮೇಶ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. 2019ರ ಉಪ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು. ಈಗ ಅವರ ವಿರುದ್ಧ ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.

3. ಕಾಗವಾಡ: ಶ್ರೀಮಂತ ಪಾಟೀಲ್ – ಸೋಲು

ಬಿಜೆಪಿ ಸೇರಿದ ಶ್ರೀಮಂತ ಪಾಟೀಲ್ ಸಹ ಅನರ್ಹಗೊಂಡು ಮುಂಬೈ ಸೇರಿದ್ದರು. ಆನಂತರ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಭರಮಗೌಡ ಆಲಗೌಡ ಕಾಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

4. ಯಲ್ಲಾಪುರ: ಶಿವರಾಮ ಹೆಬ್ಬಾರ – ಗೆಲುವು

ಉತ್ತರ ಕನ್ನಡದ ಯಲ್ಲಾಪುರದ ಕಾಂಗ್ರೆಸ್ ಶಾಸಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಅಲ್ಲದೆ ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಶಾಸಕರಾಗಿದ್ದರು. ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಣಕ್ಕಿಳಿದಿದ್ದರು. ಶಿವರಾಮ್ ಹೆಬ್ಬಾರ್ ಮತ್ತೆ ಗೆದ್ದಿದ್ದಾರೆ.

5. ವಿಜಯನಗರ: ಸಿದ್ಧಾರ್ಥ ಸಿಂಗ್ – ಸೋಲು

ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆದ್ದಿದ್ದರು. ಈ ಬಾರಿ ಅವರು ಸ್ಪರ್ಧಿಸದೆ ಅವರ ಮಗ ಸಿದ್ಧಾರ್ಥ ಸಿಂಗ್ ರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಎಚ್.ಆರ್ ಗವಿಯಪ್ಪ ಗೆಲುವು ಸಾಧಿಸಿದರು.

6. ಹಿರೇಕೆರೂರು: ಬಿ.ಸಿ ಪಾಟೀಲ್ – ಸೋಲು

ಕಾಂಗ್ರೆಸ್‌ನಿಂದ ಗೆದ್ದಿದ್ದ ಬಿ.ಸಿ ಪಾಟೀಲ್ ಆಪರೇಷನ್ ಕಮಲದ ಕಾರಣಕ್ಕೆ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆಗ ಬಿಜೆಪಿಯಲ್ಲಿ ಯು.ಬಿ ಬಣಕಾರ್ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದರು.

7. ಚಿಕ್ಕಬಳ್ಳಾಪುರ: ಡಾ.ಕೆ ಸುಧಾಕರ್ – ಸೋಲು

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಬಿಜೆಪಿ ಸೇರಿ ಸಚಿವರಾದರು. ಈಗ ಅವರೆದುರು ಕಾಂಗ್ರೆಸ್ ಪಕ್ಷದ ಬಲಿಜ ಸಮುದಾಯದ ಪ್ರದೀಪ್ ಈಶ್ವರ್‌ರವರನ್ನು ಕಣಕ್ಕಿಳಿಸಿದೆ. ಜೆಡಿಎಸ್‌ನಿಂದ ಕೆ.ಪಿ ಬಚ್ಚೇಗೌಡ ಕಣದಲ್ಲಿದ್ದರು. ಪ್ರದೀಪ್ ಈಶ್ವರ್ ಅಚ್ಚರಿಯ ರೀತಿಯಲ್ಲಿ ಡಾ.ಕೆ ಸುಧಾಕರ್‌ರನ್ನು ಸೋಲಿಸಿದ್ದಾರೆ.

8. ಕೆ.ಆರ್ ಪುರಂ: ಭೈರತಿ ಬಸವರಾಜು – ಗೆಲುವು

ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಭೈರತಿ ಬಸವರಾಜು ಬಿಜೆಪಿ ಸೇರಿದ್ದಾರೆ. ಅವರ ಎದುರು ಡಿ.ಕೆ ಮೋಹನ್ ಎಂಬುವವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ ಭೈರತಿ ಬಸವರಾಜು ಗೆಲುವು ಸಾಧಿಸಿದ್ದಾರೆ.

9. ಯಶವಂತಪುರ: ಎಸ್‌.ಟಿ ಸೋಮಶೇಖರ್ – ಗೆಲುವು

ಕಾಂಗ್ರೆಸ್ ತೊರೆದಿದ್ದ ಎಸ್‌.ಟಿ ಸೋಮಶೇಖರ್ ಈಗ ಬಿಜೆಪಿ ಹುರಿಯಾಳು ಆಗಿದ್ದಾರೆ. ಅವರ ವಿರುದ್ಧ ಜೆಡಿಎಸ್‌ನ ಜವರಾಯೀಗೌಡ ಸ್ಪರ್ಧಿಸಿದ್ದರು. ಎಸ್.ಬಾಲರಾಜಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಎಸ್.ಟಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ.

10. ರಾಜರಾಜೇಶ್ವರಿ ನಗರ: ಮುನಿರತ್ನ ನಾಯ್ಡು – ಗೆಲುವು

ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮುನಿರತ್ನ ನಾಯ್ಡು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈಗ ಮತ್ತೆ ಅವರೇ ಬಿಜೆಪಿ ಅಭ್ಯರ್ಥಿ. ಕುಸುಮ ಹನುಮಂತರಾಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

11. ಮಹಾಲಕ್ಷ್ಮಿ ಲೇಔಟ್: ಕೆ.ಗೋಪಾಲಯ್ಯ – ಸೋಲು

ಜೆಡಿಎಸ್‌ನಿಂದ ಗೆಲುವು ಕಂಡಿದ್ದ ಗೋಪಾಲಯ್ಯನವರು ಬಿಜೆಪಿ ಸೇರಿ ಸಚಿವರಾದರು. ಅವರೀಗ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಅವರ ಎದುರು ಕೇಶವಮೂರ್ತಿ ಕಾಂಗ್ರೆಸ್ ಎದುರಾಳಿಯಾದರೆ, ರಾಜಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆದರೂ ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ.

12. ಹೊಸಕೋಟೆ: ಎಂಟಿಬಿ ನಾಗರಾಜ್ – ಸೋಲು

ಎಂಟಿಬಿ ನಾಗರಾಜ್ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದರು. ಈ ಬಾರಿ ಶರತ್ ಬಚ್ಚೇಗೌಡರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

13. ಕೆ.ಆರ್ ಪೇಟೆ: ಕೆ.ಸಿ ನಾರಾಯಣಗೌಡ – ಸೋಲು

ಕೆ.ಆರ್ ಪೇಟೆಯಲ್ಲಿ ಜೆಡಿಎಸ್‌ನಿಂದ ಗೆಲುವು ಕಂಡಿದ್ದ ನಾರಾಯಣಗೌಡ ಬಿಜೆಪಿ ಸೇರಿ ಉಪಚುನಾವಣೆ ಗೆದ್ದರು. ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದರು. ಈಗ ಅವರ ಎದುರು ಬಿ.ಎಲ್ ದೇವರಾಜು ಕಾಂಗ್ರೆಸ್‌ನಿಂದ ಮತ್ತು ಹೆಚ್.ಟಿ ಮಂಜುನಾಥ್ ಜೆಡಿಎಸ್ ಅಭ್ಯರ್ಥಿಗಳಾಗಿದ್ದರು. ಹೆಚ್ ಟಿ ಮಂಜುನಾಥ್ ಗೆಲುವು ಕಂಡರು.

14. ಹುಣಸೂರು: ಎಚ್ ವಿಶ್ವನಾಥ್ – ಜೆಡಿಎಸ್ ಗೆಲುವು

ಜೆಡಿಎಸ್ ನಿಂದ ಗೆಲುವು ಕಂಡಿದ್ದ ಎಚ್ ವಿಶ್ವನಾಥ್ ರವರು ಬಿಜೆಪಿ ಸೇರಿದರೂ ಉಪ ಚುನಾವಣೆಯಲ್ಲಿ ಸೋಲು ಕಂಡರು. ಆನಂತರ ಅವರನ್ನು ಎಂಎಲ್‌ಸಿ ಮಾಡಲಾಯಿತು. ಕೊನೆಗೆ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಆದರೆ ಅವರು ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಎಚ್.ಪಿ ಮಂಜುನಾಥ್, ಜೆಡಿಎಸ್‌ನಿಂದ ಜಿ.ಟಿ ದೇವೇಗೌಡರ ಮಗ ಹರೀಶ್ ಗೌಡ ಮತ್ತು ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್ ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಗೆಲುವು ಕಂಡರು.

15. ಮಸ್ಕಿ: ಪ್ರತಾಪ್ ಗೌಡ ಪಾಟೀಲ – ಸೋಲು

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ್ ಎದುರು ಸೋಲು ಕಂಡಿದ್ದರು. ಈ ಬಾರಿಯೂ ಬಸನಗೌಡ ತುರ್ವಿಹಾಳ್ ಗೆಲುವು ಕಂಡಿದ್ದಾರೆ.

16. ರಾಣೇಬೆನ್ನೂರು: ಆರ್ ಶಂಕರ್ – ಸೋಲು

ಪಕ್ಷೇತರ ಅಭ್ಯರ್ಥಿಯಾದ ಆರ್. ಶಂಕರ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ಆದರೆ ಆಪರೇಷನ್‌ಗೆ ಒಳಗಾದರು. ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಇದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರಕಾಶ್ ಕೋಳಿವಾಡ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...