Homeಮುಖಪುಟಹೆಸರಾಂತ ಆಹಾರ ತಜ್ಞ ಕೆ.ಸಿ.ರಘು ನಿಧನ

ಹೆಸರಾಂತ ಆಹಾರ ತಜ್ಞ ಕೆ.ಸಿ.ರಘು ನಿಧನ

- Advertisement -
- Advertisement -

ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ.ರಘು ಅವರು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

60 ವರ್ಷ ವಯಸ್ಸಿನ ಕೆ.ಸಿ.ರಘು ಅವರು ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು. ಅಂತಿಮ ಸಂದರ್ಶನ ಪಡೆಯುವವರು ನಿವಾಸಕ್ಕೆ ಭೇಟಿ ನೀಡಬಹುದು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಅವರು ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು.

ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕೆ.ಸಿ.ರಘು ಅವರು ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ನ್ಯಾಯಪಥ ಕನ್ನಡ ವಾರಪತ್ರಿಕೆ(ಪಾಕ್ಷಿಕ)ಗೂ ಲೇಖನಗಳನ್ನು ಬರೆಯುತ್ತಿದ್ದರು.

ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು ಆಹಾರಕ್ಕೆ ಸಂಬಂಧಪಟ್ಟ ಲೇಖಕರಾಗಿ, ‘ಆಹಾರ ರಾಜಕೀಯ’ ಮತ್ತು ‘ತುತ್ತು ತತ್ವ’ ಎಂಬ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

0
ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...