Homeಸಿನಿಮಾಕ್ರೀಡೆಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ಇನ್ನಿಲ್ಲ

ಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ಇನ್ನಿಲ್ಲ

- Advertisement -
- Advertisement -

ಫುಟ್‌ಬಾಲ್‌ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರನೆಂಬ ಖ್ಯಾತಿಗೆ ಒಳಗಾಗಿದ್ದ ಬ್ರೆಜಿಲ್ ದೇಶದ ಪೀಲೆ (82) ಕೊನೆಯುಸಿರೆಳೆದಿದ್ದಾರೆ.

ಮೂರು ಬಾರಿ ಫಿಫಾ ವಿಶ್ವಕಪ್‌ ವಿಜೇತ ತಂಡದಲ್ಲಿದ್ದ ಏಕೈಕ ಆಟಗಾರರಾಗಿದ್ದ ಪೀಲೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಬಾರಿಯ ಫಿಫಾ ವಿಶ್ವಕಪ್ ಅನ್ನು ಅವರು ಆಸ್ಪತ್ರೆಯಲ್ಲಿಯೇ ನೋಡಬೇಕಾಗಿತ್ತು. ಅವರು ಗುರುವಾರ ಮಧ್ಯರಾತ್ರಿ ಸಾವ್‌ಪೌಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಎಡ್ಸನ್‌ ಅರಾಂಟೆಸ್‌ ಡು ನಸಿಮೆಂಟೊ ನಿಜನಾಮದ ಪೀಲೆ 1,366 ಪಂದ್ಯಗಳಲ್ಲಿ 1,281 ಗೋಲು ಗಳಿಸಿ ದಾಖಲೆ ಮಾಡಿದ್ದಾರೆ. ಫಿಫಾ ಶತಮಾನದ ಆಟಗಾರ ಪ್ರಶಸ್ತಿ ಪುರಸ್ಕೃತರಾಗಿದ್ದ ಪೀಲೆ, ಟೈಮ್ಸ್‌ನ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದರು.

ಪ್ರಪಂಚದೆಲ್ಲಡೆ ಸಂತಾಪ

ಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ನಿಧನಕ್ಕೆ ಪ್ರಪಂಚದಾದ್ಯಂತ ಸಂತಾಪ ಸೂಚಿಸಲಾಗಿದೆ. ಫ್ರಾನ್ಸ್‌ನ ಉದಯೋನ್ಮುಖ ಆಟಗಾರ ಕಿಲಿಯನ್ ಎಂಬಾಪೆ, “ಫುಟ್ಬಾಲ್ ರಾಜ ನಮ್ಮನ್ನು ಅಗಲಿದ್ದಾರೆ. ಆದರೆ ಅವರ ಪರಂಪರೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಬ್ರೆಜಿಲ್‌ನ ಇತ್ತೀಚಿನ ಪೀಳಿಗೆಗೆ ಸಿಗಲಾರದ ಅವಕಾಶ ನನಗೆ ಸಿಕ್ಕಿತ್ತು. ನಾನು ಪಕೆಂಬು ಮತ್ತು ಮೊರುಂಬಿಯಲ್ಲಿ ಪೀಲೆ ಆಡುವುದನ್ನು ನಾನು ನೇರವಾಗಿ ನೋಡಿದ್ದೇನೆ. ಚೆಂಡು ಪೀಲೆಗೆ ಸಿಕ್ಕಿತ್ತೆಂದರೆ ಅವರು ವಿಶೇಷವಾದುದ್ದನ್ನು ಮಾಡುತ್ತಿದ್ದರು. ಹಲವು ಬಾರಿ ಅದು ಗೋಲ್‌ನೊಂದಿಗೆ ಕೊನೆಗೊಳ್ಳುತ್ತಿತ್ತು” ಎಂದು ಬ್ರೆಜಿಲ್ ಅಧ್ಯಕ್ಷ ಲುಲಾ ನೆನಪಿಸಿಕೊಂಡಿದ್ದಾರೆ.

ಪೀಲೆ ಸುಂದರ ಆಟವಾಡಿದ ಶ್ರೇಷ್ಠರಲ್ಲಿ ಒಬ್ಬರು. ವಿಶ್ವದ ಪ್ರಮುಖ ಕ್ರೀಡಾಪಟುಗಳಲ್ಲಿ ಒಬ್ಬರಾಗಿ, ಜನರನ್ನು ಒಟ್ಟುಗೂಡಿಸುವ ಕ್ರೀಡೆಯ ಶಕ್ತಿಯನ್ನು ಅವರು ಅರ್ಥಮಾಡಿಕೊಂಡರು. ಅವರ ಕುಟುಂಬ ಮತ್ತು ಅವರನ್ನು ಪ್ರೀತಿಸುವ ಮತ್ತು ಮೆಚ್ಚಿದ ಪ್ರತಿಯೊಬ್ಬರಿಗೂ ನನ್ನ ಸಂತಾಪಗಳು ಎಂದು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಟ್ವೀಟ್ ಮಾಡಿದ್ದಾರೆ.

ಪೀಲೆ ಕೇವಲ ಫುಟ್‌ಬಾಲ್‌ನ ರಾಜನಲ್ಲ, ಆದರೆ ನಿರ್ವಿವಾದವಾಗಿ 20ನೇ ಶತಮಾನದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದರು. ಕಪ್ಪು ಮುತ್ತು ಎಂದು ಖ್ಯಾತರಾಗಿದ್ದ ಅವರು ಯಾವಾಗಲೂ ಎಲ್ಲಾ ಅರ್ಥದಲ್ಲಿ ಫುಟ್‌ಬಾಲ್‌ನ ಐಕಾನ್ ಆಗಿ ಉಳಿಯುತ್ತದೆ. ಅವರು ಮರೆಯಲಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...