’ನ್ಯಾಯಾಲಯದ ತೀರ್ಪಿಗೆ ತಲೆಬಾಗಿ, ಸದ್ಭಾವದಿಂದ ನಡೆದುಕೊಳ್ಳಬೇಕು’…

ಸುಪ್ರೀಂಕೋರ್ಟ್‌ ತೀರ್ಪನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇನೆ. ನಾವೆಲ್ಲರೂ ಸದ್ಭಾವದಿಂದ ನಡೆದುಕೊಳ್ಳಬೇಕು. ಈ ಸಮಯ ಭಾರತೀಯರ ಬಂಧುತ್ವ, ವಿಶ್ವಾಸ, ಪ್ರೇಮದ್ದಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್‌ ತೀರ್ಪು ಪ್ರಕಟಿಸಿದೆ. ಎಲ್ಲ ಪಕ್ಷಗಳು, ಸಮುದಾಯ, ನಾಗರಿಕರು ತೀರ್ಪನ್ನು ಗೌರವಿಸೋಣ. ಶತಮಾನಗಳಿಂದ ಬಂದಿರುವ ವೈವಿಧ್ಯತೆಯಲ್ಲಿ ಏಕತೆ ಸಾರುವ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಬೇಕು. ನಾವೆಲ್ಲರೂ ಒಂದುಗೂಡುವ ಮೂಲಕ ನಮ್ಮೊಳಗಿನ ಭ್ರಾತೃತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಮಾತನಾಡಿ, ಸುಪ್ರೀಂಕೋರ್ಟ್‌ ಸಮತೋಲನದ ತೀರ್ಪು ನೀಡಿದೆ. ಜನರು ಸುಪ್ರೀಂ ತೀರ್ಪನ್ನು ಒಪ್ಪುವ ಮೂಲಕ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿ, ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ವ್ಯಾಜ್ಯ ಆದಷ್ಟು ಬೇಗ ಬಗೆಹರಿಯಲಿ ಎಂದು ನಾವು ಭಾವಿಸಿದ್ದೆವು, ಅದು ಇಂದು ಕೈಗೂಡಿದೆ. ಎಲ್ಲಾ ಕೋನಗಳಿಂದಲೂ ನೋಡಿದರೆ ಸತ್ಯ ಮತ್ತು ನ್ಯಾಯ ಸಿಕ್ಕಿದೆ ಎಂದು ಹೇಳಿದರು.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here