Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...