Homeಚಳವಳಿಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ. ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರಗಳು ಲವ್ ಜಿಹಾದ್ ನಡೆಯುತ್ತಿದೆ, ಅದನ್ನು ತಡೆಯಲು ಕಾನೂನು ತರುವುದಾಗಿ ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಇಲ್ಲದಿರುವ ಬಿಕ್ಕಟ್ಟುಗಳನ್ನು ನಿಯಂತ್ರಿಸುವ ನೆಪದಲ್ಲಿ ತರುತ್ತಿರುವ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ ಎಂದು ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಕರೆ ನೀಡಿದೆ.

ಡಿಸೆಂಬರ್ 01 ರ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರೀತಿಸುವುದು ಅಪರಾಧವಲ್ಲ, ನಮ್ಮ ಬಾಳಸಂಗಾತಿಯಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿಯ ಅನುಮತಿ ಬೇಕಿಲ್ಲ ಎಂದು ಸಾರಲು ಸಮಿತಿ ಸಿದ್ದವಾಗಿದೆ.

ಬಿಜೆಪಿಯ ಆಡಳಿತ ವೈಫಲ್ಯದಿಂದಾಗಿ ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೋರಿವೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ಧೀರೋದಾತ್ತವಾಗಿ ಹೋರಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯು ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿಯವರು 2020ರ ಫೆಬ್ರವರಿಯಲ್ಲಿ ಲೋಕಸಭೆಗೆ ತಿಳಿಸಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ಹೈಕೋರ್ಟ್‌ಗಳು ಲವ್ ಜಿಹಾದ್ ಎಂಬುದು ಇಲ್ಲವೇ ಇಲ್ಲ ಎಂದು ತೀರ್ಪು ನೀಡಿವೆ. ಆದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ದ್ವೇಷ ಹರಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ದೇಶದ ಸರ್ವೋಚ್ಛ ನ್ಯಾಯಾಲಯವು “ವಯಸ್ಸಿಗೆ ಬಂದ ಪ್ರತಿ ಪ್ರಜೆಗೂ ತಮ್ಮ ಬಾಳಸಂಗಾತಿ ಯಾರೆಂದು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ಇದನ್ನು ನಿರ್ಬಂಧಿಸಲು ಸರ್ಕಾರ ಅಥವಾ ಬೇರೆ ಯಾರಿಗೂ ಅಧಿಕಾರವಿಲ್ಲ ಎಂದಿದೆ. ಅಲ್ಲದೇ ದೇಶದಲ್ಲಿ ನಡೆಯುವ ಅಂತರ್‌ಜಾತಿ-ಅಂತರ್ ಧರ್ಮೀಯ ವಿವಾಹಿತರಿಗೆ ಸರ್ಕಾರ ರಕ್ಷಣೆ ನೀಡಬೇಕೇಂದು ತೀರ್ಪು ನೀಡಿದೆ. ಆದರೆ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಸಮಿತಿ ಕಿಡಿಕಾರಿದೆ. ಅಲ್ಲದೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಬಿಜೆಪಿಯ ಲವ್ ಜಿಹಾದ್ ಕಾಯ್ದೆಗೆ ವಿರುದ್ಧವಾಗಿ ತೀರ್ಪು ನೀಡಿದ್ದನ್ನು ಸ್ಮರಿಸಬಹುದು.

ಹಾಗಾಗಿ ಬಸವಣ್ಣ, ಪೆರಿಯಾರ್, ಗಾಂಧಿ, ಅಂಬೇಡ್ಕರ್, ಮತ್ತು ಇತರ ನಾಯಕ-ನಾಯಕಿಯರು ಅಂರ್ತಜಾತಿ ಮತ್ತು ಅಂತರ್‌ಧರ್ಮೀಯ ವಿಹಾಗಳನ್ನು ಪ್ರೋತ್ಸಾಹಿಸಿ, ಇವುಗಳಿಂದಲೇ ಭಾತೃತ್ವ ಮತ್ತು ಸಮಾನತಾವಾದದ ಸಮಾಜ ಸಾಧ್ಯ ಎಂದಿದ್ದರು. ಅದನ್ನು ಸಾಕಾರಗೊಳಿಸಲು ಹೋರಾಡೋಣ ಎಂದು ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...