Homeಮುಖಪುಟಮಹಾರಾಷ್ಟ್ರಕ್ಕಾಗಿ 'ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು' ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

ಮಹಾರಾಷ್ಟ್ರಕ್ಕಾಗಿ ‘ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು’ ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ “ಸಣ್ಣ ಭಿನ್ನಾಭಿಪ್ರಾಯಗಳನ್ನು” ಬದಿಗಿಡಲು ಸಿದ್ಧರಿದ್ದೇವೆ ಎಂದು ದೂರವಾದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಶನಿವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದ ನೇತೃತ್ವ ವಹಿಸಿದ್ದರೆ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಪಕ್ಷದ ನೇತೃತ್ವ ವಹಿಸಿದ್ದಾರೆ. ಮಹಾರಾಷ್ಟ್ರಕ್ಕಾಗಿ

2005 ರಲ್ಲಿ ಶಿವಸೇನೆಯ ಸಂಸ್ಥಾಪಕ ಬಾಳಾ ಠಾಕ್ರೆ ತಮ್ಮ ಪುತ್ರ ಉದ್ಧವ್ ಠಾಕ್ರೆ ಅವರನ್ನು ಉತ್ತರಾಧಿಕಾರಿಯಾಗಿ ಹೆಸರಿಸಿದ ನಂತರ ರಾಜ್ ಠಾಕ್ರೆ ಆಗಿನ ಅವಿಭಜಿತ ಶಿವಸೇನೆಯನ್ನು ತೊರೆದಿದ್ದರು. ಒಂದು ವರ್ಷದ ನಂತರ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಪ್ರಾರಂಭಿಸಿದ್ದರು.

ಶನಿವಾರ ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ, “ನನಗೆ, ಮಹಾರಾಷ್ಟ್ರದ ಹಿತಾಸಕ್ತಿ ದೊಡ್ಡದಾಗಿದ್ದು, ಉಳಿದೆಲ್ಲವೂ ಗೌಣವಾಗಿದೆ. ಅದಕ್ಕಾಗಿ ನಮ್ಮ ಸಣ್ಣ ವಿವಾದಗಳನ್ನು ನಾವು ಬದಿಗಿಡಬಹುದು.” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಶಿವಸೇನೆ (ಯುಬಿಟಿ) ಮುಖ್ಯಸ್ಥರಾದ ಉದ್ಧವ್ ಠಾಕ್ರೆ ತಮ್ಮೊಂದಿಗೆ ಕೆಲಸ ಮಾಡಲು ಸಿದ್ಧರಿದ್ದಾರೆಯೇ ಎಂಬುದು ಒಂದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

“ಪ್ರಮುಖ ಸಮಸ್ಯೆಗಳು ಉದ್ಭವಿಸಿದಾಗ, ನಮ್ಮ ನಡುವಿನ ವಿವಾದಗಳು ಮತ್ತು ಜಗಳಗಳು ಚಿಕ್ಕದಾಗಿರುತ್ತವೆ. ಮಹಾರಾಷ್ಟ್ರ ಮತ್ತು ಮರಾಠಿ ಜನರ ವಿಚಾರದಲ್ಲಿ ನಮ್ಮ ನಡುವಿನ ಸಂಘರ್ಷಗಳು ಅಷ್ಟೆನೂ ದೊಡ್ಡ ವಿಚಾರವಲ್ಲ” ಎಂದು ಅವರು ಹೇಳಿದ್ದಾರೆ.

ಅವರ ಈ ಹೇಳಿಕೆಯ ನಂತರ ಉದ್ಧವ್ ಠಾಕ್ರೆ ಅವರು ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರದ ಹಿತದೃಷ್ಟಿಯಿಂದ ತಮ್ಮ ವಿವಾದಗಳನ್ನು ಬದಿಗಿಡಲು ಸಿದ್ಧರಿರುವುದಾಗಿ ಹೇಳಿದ್ದಾರೆ. “ಸಣ್ಣ ಜಗಳಗಳನ್ನು ಬದಿಗಿಟ್ಟು ಮರಾಠಿ ಸಮುದಾಯದ ಹಿತಾಸಕ್ತಿಗಾಗಿ ಒಟ್ಟಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಮೊದಲು, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವವರನ್ನು ಮನೆಗೆ ಆಹ್ವಾನಿಸುವುದನ್ನು ಮತ್ತು ಅವರಿಗೆ  ಊಟ ಬಡಿಸುವುದನ್ನು ನಿಲ್ಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ. ನಂತರ ರಾಜ್ಯದ ಕಲ್ಯಾಣದ ಬಗ್ಗೆ ಮಾತನಾಡಬೇಕು.” ಎಂದು ಅವರು ಹೇಳುದ್ದಾರೆ. ಅವರು ಈ ಹೇಳಿಕೆಗಳನ್ನು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ ರಾಜ್ ಠಾಕ್ರೆ ಅವರ ಮೈತ್ರಿಯನ್ನು ಉಲ್ಲೇಖಿಸಿ ಹೇಳಿದ್ದಾಗಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಕೈಗಾರಿಕೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ನಾನು ಹೇಳುತ್ತಿದ್ದೆ. ಆ ಸಮಯದಲ್ಲಿ ಈ ಬಗ್ಗೆ ವಿರೋಧಿಸುತ್ತಿದ್ದರೆ, ಇಂದು ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಶನಿವಾರದ ಬೆಳವಣಿಗೆಯ ಕುರಿತು ಮಾತನಾಡಿದ ಉದ್ಧವ್ ನೇತೃತ್ವದ ಶಿವಸೇನೆಯ ವಕ್ತಾರ ಸಂಜಯ್ ರಾವತ್, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವವರೊಂದಿಗೆ ರಾಜ್ ಠಾಕ್ರೆ ವ್ಯವಹರಿಸಬೇಕು ಎಂದು ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು [ರಾಜ್] ಒಬ್ಬ ಠಾಕ್ರೆ. ಉದ್ಧವ್ ಕೂಡ ಒಬ್ಬ ಠಾಕ್ರೆ. ಅವರ ಸಂಬಂಧ ಶಾಶ್ವತ. ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ, ಅವರು ಪ್ರತ್ಯೇಕ ಮಾರ್ಗಗಳನ್ನು ಆರಿಸಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಮಹಾರಾಷ್ಟ್ರದ ಶತ್ರುಗಳಿಗೆ ಯಾವುದೇ ರೀತಿಯ ಸಹಾಯವನ್ನು ನೀಡಬಾರದು ಎಂದು ನಾವು ಸ್ಪಷ್ಟಪಡಿಸಿದ್ದೆವು. ಮಹಾರಾಷ್ಟ್ರವನ್ನು ಕಡಿಮೆ ಅಂದಾಜು ಮಾಡುವ ಕೆಲವು ಶಕ್ತಿಗಳಿವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದರು. ಅವರು ಮರಾಠಿ ಜನರ ಹಿತಾಸಕ್ತಿಗಳ ವಿರುದ್ಧ ಪಿತೂರಿ ನಡೆಸುತ್ತಲೇ ಇದ್ದಾರೆ.” ಎಂದು ಸಂಜಯ್ ಹೇಳಿದ್ದಾರೆ

ಅಂತಹ ಶಕ್ತಿಗಳೊಂದಿಗೆ ರಾಜ್ ಠಾಕ್ರೆ ಬೆರೆಯಬಾರದು ಅಥವಾ ಕುಳಿತುಕೊಳ್ಳಬಾರದು. ಅವರು [ರಾಜ್] ಈ ನಿಲುವನ್ನು ಅಳವಡಿಸಿಕೊಳ್ಳಬೇಕು. ಅವರು ಈ ನಿಲುವನ್ನು ತೆಗೆದುಕೊಂಡರೆ, ನಾವು … ಚರ್ಚೆಗಳನ್ನು ನಡೆಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....