Homeಮುಖಪುಟ'ಬಿಜೆಪಿಗೆ ಚುನಾವಣೆಗಳೇ ಮುಖ್ಯ, ದೇಶವಲ್ಲ..'; ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರವಾಗಿ ಕೇಂದ್ರದ ವಿರುದ್ಧ ಅಖಿಲೇಶ್ ಯಾದವ್...

‘ಬಿಜೆಪಿಗೆ ಚುನಾವಣೆಗಳೇ ಮುಖ್ಯ, ದೇಶವಲ್ಲ..’; ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರವಾಗಿ ಕೇಂದ್ರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

- Advertisement -
- Advertisement -

ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ಹಿತಾಸಕ್ತಿಗಿಂತ ಚುನಾವಣಾ ಲಾಭಕ್ಕೆ ಬಿಜೆಪಿ ಆದ್ಯತೆ ನೀಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.

‘ಬಿಜೆಪಿಗೆ ಚುನಾವಣೆಗಳೇ ಎಲ್ಲವೂ, ದೇಶವಲ್ಲ. ಅದಕ್ಕಾಗಿಯೇ ದೇಶದ ಗಡಿಗಳಿಗಿಂತ ಲೋಕಸಭಾ ಕ್ಷೇತ್ರಗಳ ಗಡಿಗಳ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ’ ಎಂದು ಅಖಿಲೇಶ್ ಯಾದವ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಿಳಾ ಮೀಸಲಾತಿ ಜಾರಿಗೆ ತರುವುದು ಮತ್ತು ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ಕ್ಷೇತ್ರ ಮರುವಿಂಗಡಣೆ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಶಾಸನಾತ್ಮಕ ಪ್ರಸ್ತಾವನೆಗಳಿಗೆ ರಾಜಕೀಯ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ.

ಶುಕ್ರವಾರವೂ ಈ ಪ್ರಸ್ತಾವಿತ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಬಿಜೆಪಿ ಮುಂದಾಗಿರುವುದನ್ನು ಟೀಕಿಸಿದ್ದ ಅವರು, ಇದು ಬಿಜೆಪಿಯ ‘ಅತಿದೊಡ್ಡ ತಪ್ಪು’ ಎಂದು ಬಣ್ಣಿಸಿದ್ದರು.

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಅಖಿಲೇಶ್ ಅವರ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ. ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜಾತಿ ಗಣತಿ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ವಿವಿಧ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಯೋಗಿ ಆದಿತ್ಯನಾಥ್ ಬೆಂಬಲ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಕೇಂದ್ರ ಸಚಿವ ಸಂಪುಟದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ನೀಡಿರುವ ಅನುಮೋದನೆಯನ್ನು ಸ್ವಾಗತಿಸಿದ್ದಾರೆ.

2029ರ ವೇಳೆಗೆ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವನೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಉತ್ತರ ಪ್ರದೇಶದ ಎಲ್ಲ 80 ಲೋಕಸಭಾ ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ಸ್ವಾಗತಿಸಿದ ಯೋಗಿ ಆದಿತ್ಯನಾಥ್, ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಕಾರಣವಾಗಿದೆ ಎಂದು ಹೇಳಿದ್ದಾರೆ.

‘ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಅನುಮೋದನೆ ನೀಡಿದ ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯಾದ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಈಗಾಗಲೇ ಸಂಸತ್ತು ಅಂಗೀಕರಿಸಿದೆ. 2029ರ ವೇಳೆಗೆ ಈ ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಸಚಿವ ಸಂಪುಟ ಹಾದಿ ಸುಗಮಗೊಳಿಸಿದೆ. ಸಂಸತ್ತು ಮತ್ತು ವಿಧಾನಸಭೆಗಳ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವುದರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಸಾಧ್ಯವಾಗಲಿದೆ’ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಲೋಕಸಭಾ ಸ್ಥಾನಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳಕ್ಕೆ ಪ್ರಸ್ತಾವನೆ

ಕೇಂದ್ರ ಸಚಿವ ಸಂಪುಟ ಅನುಮೋದಿಸಿರುವ ಪ್ರಸ್ತಾವಿತ ಶಾಸನಾತ್ಮಕ ಪ್ಯಾಕೇಜ್‌ನಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವುದರ ಜೊತೆಗೆ, 2029ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಹೊಸದಾಗಿ ಕ್ಷೇತ್ರ ಮರುವಿಂಗಡಣೆ ನಡೆಸುವ ಪ್ರಸ್ತಾವನೆಯೂ ಸೇರಿದೆ.

ಇದರೊಂದಿಗೆ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದು ಮತ್ತು 2051ರವರೆಗೆ ರಾಜ್ಯಗಳ ನಡುವಿನ ಸ್ಥಾನ ಹಂಚಿಕೆಯನ್ನು ಸ್ಥಗಿತಗೊಳಿಸುವ ಪ್ರಸ್ತಾವನೆಯೂ ಇದೆ. ಈ ಕ್ರಮಗಳು ಭಾರತದ ಚುನಾವಣಾ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿವೆ ಎಂದು ನಿರೀಕ್ಷಿಸಲಾಗಿದೆ.

ಪ್ರಸ್ತಾವನೆಯ ಪ್ರಕಾರ, ಲೋಕಸಭೆಯ ಗರಿಷ್ಠ ಸದಸ್ಯರ ಸಂಖ್ಯೆ ಈಗಿನ 550ರಿಂದ 850ಕ್ಕೆ ಏರಿಕೆಯಾಗಲಿದೆ. ರಾಜ್ಯ ವಿಧಾನಸಭೆಗಳ ಗರಿಷ್ಠ ಸದಸ್ಯರ ಸಂಖ್ಯೆಯ ಮಿತಿಯನ್ನು 650ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ.

ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರ ಸಂಖ್ಯೆಯನ್ನು ಈಗಿರುವ 403ರಿಂದ 650ಕ್ಕೆ ಹೆಚ್ಚಿಸುವ ಪ್ರಸ್ತಾವನೆಯೂ ಇದರಲ್ಲಿದೆ.

ಕ್ಷೇತ್ರ ಮರುವಿಂಗಡಣೆಗೆ 2011ರ ಜನಗಣತಿ ಬಳಸಲು ಕೇಂದ್ರದ ಪ್ರಸ್ತಾವನೆ

ಮಹಿಳಾ ಮೀಸಲಾತಿ ಜಾರಿಯನ್ನು 2026ರ ಜನಗಣತಿಯಿಂದ ಪ್ರತ್ಯೇಕಗೊಳಿಸುವ ಉದ್ದೇಶವನ್ನು ಪ್ರಸ್ತಾವಿತ ಚೌಕಟ್ಟು ಹೊಂದಿದೆ. ಕ್ಷೇತ್ರ ಮರುವಿಂಗಡಣೆ ಮತ್ತು ಕ್ಷೇತ್ರಗಳ ಮರುಹೊಂದಾಣಿಕೆಗೆ 2011ರ ಜನಗಣತಿಯ ಅಂಕಿಅಂಶಗಳನ್ನು ಬಳಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಆದರೆ, ಪ್ರತಿ ರಾಜ್ಯಕ್ಕೆ ಹಂಚಿಕೆಯಾಗುವ ಲೋಕಸಭಾ ಸ್ಥಾನಗಳ ಪ್ರಮಾಣವನ್ನು ನಿರ್ಧರಿಸಲು 1971ರ ಜನಗಣತಿಯನ್ನೇ ಆಧಾರವಾಗಿ ಮುಂದುವರಿಸಲು ಪ್ರಸ್ತಾಪಿಸಲಾಗಿದೆ.

ಈ ಶಾಸನಾತ್ಮಕ ಪ್ಯಾಕೇಜ್‌ನಲ್ಲಿ ಎರಡು ಸಂವಿಧಾನ ತಿದ್ದುಪಡಿ ಮಸೂದೆಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ತಿದ್ದುಪಡಿ ಮಸೂದೆ ಸೇರಿವೆ.

ಇವುಗಳಲ್ಲಿ ಸಂವಿಧಾನದ 131ನೇ ತಿದ್ದುಪಡಿ ಮಸೂದೆಯು ರಾಜ್ಯಗಳ ನಡುವಿನ ಲೋಕಸಭಾ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದ ಬದಲಾವಣೆಗಳನ್ನು ಪ್ರಸ್ತಾಪಿಸುತ್ತದೆ. ಪ್ರತಿ ರಾಜ್ಯಕ್ಕೆ ಸಂಸತ್ತಿನಲ್ಲಿ ದೊರೆಯುವ ಪ್ರಾತಿನಿಧ್ಯದ ಪ್ರಮಾಣವನ್ನು ನಿರ್ಧರಿಸಲು 1971ರ ಜನಗಣತಿಯನ್ನೇ ಆಧಾರವಾಗಿ ಉಳಿಸಿಕೊಳ್ಳುವ ಪ್ರಸ್ತಾವನೆಯನ್ನು ಇದು ಒಳಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೆಂಬಲ ನೀಡಿ, ಇಲ್ಲವೇ ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆ ಎದುರಿಸಿ” : ಡಿಎಂಕೆಗೆ ಬಿಜೆಪಿ ಪರೋಕ್ಷ ಎಚ್ಚರಿಕೆ-ವರದಿ

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಬೆಂಬಲ ನೀಡಲು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನಿರ್ಧರಿಸಿದೆ. ಶನಿವಾರ (ನ.28) ಚೆನ್ನೈನಲ್ಲಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಡಿಎಂಕೆ ಅಧಿಕೃತ ಬೆಂಬಲ: ದಕ್ಷಿಣ ಭಾರತದ ಪ್ರಾತಿನಿಧ್ಯಕ್ಕೆ ಸಂದ ಜಯ ಎಂದ ಎಂ.ಕೆ. ಸ್ಟಾಲಿನ್

ಚೆನ್ನೈ: ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಪುನರ್‌ವಿಂಗಡಣೆ (Delimitation) ಸಂವಿಧಾನ ತಿದ್ದುಪಡಿ ಮಸೂದೆಗೆ ಡಿಎಂಕೆ ಶನಿವಾರ ಅಧಿಕೃತವಾಗಿ ಬೆಂಬಲ...

ನ್ಯಾಯಾಂಗ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ, ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲು ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಹ್ಯೂಮನ್ ರೈಟ್ಸ್ ವಾಚ್ ಗಂಭೀರ ಆತಂಕ!

ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ 'ಹ್ಯೂಮನ್ ರೈಟ್ಸ್ ವಾಚ್' (HRW) ಗಂಭೀರ ಆತಂಕ ವ್ಯಕ್ತಪಡಿಸಿದೆ. ಕಾನೂನು ತಿದ್ದುಪಡಿಗಳು, ರಾಜಕೀಯ...

ತಿರುಪರಂಕುಂದ್ರಂ ಬೆಟ್ಟದ ಭದ್ರತೆ ವಹಿಸಿಕೊಂಡ ಸಿಆರ್‌ಪಿಎಫ್ : ದೀಪ ಬೆಳಗಿಸಲು ಸಿದ್ಧತೆ; ದರ್ಗಾಕ್ಕೆ ಮುಸ್ಲಿಮರ ಭೇಟಿ

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಧುರೈನ ತಿರುಪರಂಕುಂದ್ರಂ ಬೆಟ್ಟದ ಸಂಪೂರ್ಣ ಭದ್ರತೆ ಮತ್ತು ಕಣ್ಗಾವಲು ಹೊಣೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಶನಿವಾರ (ನ.28) ಬೆಳಿಗ್ಗೆ ವಹಿಸಿಕೊಂಡಿದೆ. ಬೆಟ್ಟದ ಮೇಲಿರುವ ದೀಪತ್ತೂಣ್...

ಜಾತಿವಾದಿ ಹೇಳಿಕೆ ಆರೋಪ: ಎಚ್‌ಸಿಯು ಪ್ರಾಧ್ಯಾಪಕರ ಅಮಾನತಿಗೆ ಮಾನವ ಹಕ್ಕುಗಳ ವೇದಿಕೆ ಆಗ್ರಹ

ಹಳೆಯ ವಿದ್ಯಾರ್ಥಿಗಳ ವಿರುದ್ಧ ಜಾತಿವಾದಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಎಚ್‌ಸಿಯು) ಸಹಾಯಕ ಪ್ರಾಧ್ಯಾಪಕ ವಿಜಯ್ ರಾಮದಾಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾನವ...

ಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ ನೋಟಿಸ್, 3 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಮಧ್ಯವರ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕ ಅಶುತೋಷ್ ರಾಂಕಾ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ....

ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ

ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಮುಂಬರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಬೆಂಬಲಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ...

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿಗೆ ಖರ್ಗೆ ಮನವಿ; ಡಿಎಂಕೆ, ಎಎಪಿ, ಬಿಜೆಡಿಗೂ ಆಹ್ವಾನ

ನವದೆಹಲಿ: ಮಹಿಳಾ ಮೀಸಲಾತಿ ಜಾರಿ ನೆಪದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮತ್ತೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳ ಬೆನ್ನಲ್ಲೇ, ಸರ್ಕಾರದ ನಡೆಗೆ ಸಂಘಟಿತ...