ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಅಘೋಘ ಸಾಧನೆಯೊಂದಿಗೆ ಇತಿಹಾಸದಲ್ಲಿ ಮೊದಲ ಬಾರಿಗೆ 20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸಿಡ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದ ನಂತರ ಲೀಗ್ ಹಂತದಲ್ಲಿ ನಾಲ್ಕೂ ಪಂದ್ಯಗಳಲ್ಲಿ ಜಯಗಲಿಸಿ ಅಗ್ರಸ್ಥಾನದಲ್ಲಿದ್ದ ಕಾರಣ ಭಾರತ ನೇರ ಫೈನಲ್‌ಗೆ ಪ್ರವೇಶಿಸಿದೆ.
ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ಗ್ರೂಪ್ ಹಂತದ ನಾಲ್ಕು ಪಂದ್ಯಗಳಲ್ಲಿ ಜಯಗಳಿಸಿ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ ಇಂಗ್ಲೆಂಡ್ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದ್ದ ಕಾರಣ ಭಾರತಕ್ಕೆ ಪೈನಲ್ ಹಾದಿ ಸುಗಮವಾಗಿದೆ. ಸೆಮಿಫೈನಲ್ ಮತ್ತೊಂದು ದಿನ ನಡೆಸಲು ಅವಕಾಶವಿಲ್ಲದ ಕಾರಣ ಲೀಗ್ ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ತಂಡ ಫೈನಲ್ ಪ್ರವೇಶಿಸುತ್ತದೆ ಎಂದು ಈ ಮೊದಲೇ ನಿರ್ಧರಿಸಲಾಗಿತ್ತು.
ಇನ್ನೊಂದು ಸೆಮಿಫೈನಲ್ ಪಂದ್ಯ ಇಂದು ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿದ್ದು ಗೆದ್ದ ತಂಡ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಭಾನುವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ.
ಇಂದು ಬೆಳಿಗ್ಗೆ 10;44ರವರೆಗೆ ಕಾದ ರೆಫರಿಗಳು, ಮಳೆ ನಿಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಿ ಭಾರತ ಫೈನಲ್ ಪ್ರವೇಶಿಸಿದೆ ಎಂದು ಘೋಷಿಸಿದರು.
☔ MATCH ABANDONED ☔
For the first time in their history, India have qualified for the Women's #T20WorldCup final ?? pic.twitter.com/88DHzqTbnK
— T20 World Cup (@T20WorldCup) March 5, 2020
ಈ ಸಾಧನೆಗಾಗಿ ಖ್ಯಾತ ಕ್ರಿಕೆಟ್ ಪಟುಗಳು ಟ್ವಿಟ್ಟರ್‌ನಲ್ಲಿ ಮಹಿಳಾ ತಂಡಕ್ಕೆ ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಭಾರತದ ಪುರುಷರ ತಂಡದ ನಾಯಕ ವಿರಾಟ್ ಕೊಹ್ಲಿ ಮಹಿಳಾ ತಂಡವನ್ನು ಅಭಿನಂದಿಸಿದ್ದು, ಫೈನಲ್‌ಗೆ ಶುಭ ಹಾರೈಸಿದ್ದಾರೆ. “ಟಿ 20 ವರ್ಲ್ಡ್ ಕಪ್ ಫೈನಲ್‌ಗೆ ಅರ್ಹತೆ ಪಡೆದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು. ನಮ್ಮ ಹೆಣ್ಣುಮಕ್ಕಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಮತ್ತು ಫೈನಲ್ ಪಂದ್ಯಕ್ಕೆ ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ” ಎಂದು ವಿರಾಟ್ ಟ್ವೀಟ್ ಮಾಡಿದ್ದಾರೆ.
Congratulations to the Indian Women's team on qualifying for the @T20WorldCup final. We are proud of you girls and wish you all the luck for the finals. ??? @BCCIWomen
— Virat Kohli (@imVkohli) March 5, 2020
ಅಲ್ಲದೇ ಕನ್ನಡಿಗ ಕೆ.ಎಲ್ ರಾಹುಲ್, ಮಾಜಿ ಆಟಗಾರರಾದ ಸುರೇಶ್ ರೈನಾ, ವಿವಿಎಸ್ ಲಕ್ಷ್ಮಣ್, ಮಾಜಿ ನಾಯಕಿ ಮಿಥಾಲಿ ರಾಜ್ ಸೇರಿ ಬಹಳಷ್ಟು ಮಂದಿ ಟ್ವಿಟ್ಟರ್‌ನಲ್ಲಿ ಶುಭ ಹಾರೈಸಿದ್ದಾರೆ.


