Homeಕರ್ನಾಟಕಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

- Advertisement -
- Advertisement -

ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರವು ಆರನೇ ದಿನಕ್ಕೆ ಕಾಲಿಟ್ಟಿದೆ. ನೌಕರರು ಆರನೇ ವೇತನ ಆಯೋಗ ಜಾರಿ ಮಾಡಬೇಕು ಎಂದು ಪಟ್ಟು ಹಿಡಿದಿದ್ದು, ತಮ್ಮ ಬೇಡಿಕೆಯ ಬಗ್ಗೆ ರಾಜ್ಯ ಸರ್ಕಾರ ಇದುವರೆಗೂ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವುದನ್ನು ವಿರೋಧಿಸಿ ನೌಕರರು, ಸೋಮವಾರದಂದು ತಮ್ಮ ಕುಟುಂಬ ಸಮೇತರಾಗಿ ರಾಜ್ಯದಾದ್ಯಂತ ವಿವಿಧ ಸರ್ಕಾರಿ ಕಚೇರಿಯ ಮುಂದೆ ತಟ್ಟೆ-ಲೋಟ ಬಡಿದು ಪ್ರತಿಭಟನೆ ನಡೆಸಿದರು.

ಬೆಂಗಳೂರು, ಮಂಡ್ಯ, ನೆಲಮಂಗಲ, ಚೆನ್ನಪಟ್ಟಣ, ಕೆ.ಆರ್‌. ನಗರ, ಹೊಳೆ ನರಸೀಪುರ ಮುಂತಾದ ಕಡೆ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರತಿಭಟನೆಯಲ್ಲಿ ಭಾಗವಹಿಸಿ ತಟ್ಟೆ, ಲೋಟ ಬಡಿದು ತಮ್ಮ ಸಂಕಷ್ಟವನ್ನು ಸರ್ಕಾರದ ಬಳಿ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ರಾಜ್ಯ ಸರ್ಕಾರ ಇದುವರೆಗೂ ಆರನೇ ವೇತನ ಆಯೋಗದ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಲೇ ಬಂದಿದ್ದು, ಮುಷ್ಕರ ಹಿನ್ನಲೆ ಖಾಸಗಿ ಬಸ್ಸುಗಳ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದೆ. ಜೊತೆಗೆ ಹಲವು ಬಿಜೆಪಿಯ ನಾಯಕರು ಕೆಎಸ್‌ಆರ್‌ಟಿಸಿ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಈಗಾಗಲೆ ಮುಷ್ಕರ ನಿರತ ಹಲವು ನೌಕರರಿಗೆ ಸರ್ಕಾರವು ವರ್ಗಾವಣೆಯ ಶಿಕ್ಷೆ ನೀಡಿದ್ದು, ಎಸ್ಮಾ ಜಾರಿಯ ಮಾತುಗಳನ್ನು ಇನ್ನೂ ಆಡುತ್ತಲೇ ಇದೆ. ಶನಿವಾರದಂದು ಬೆಳಗಾವಿಯಲ್ಲಿ ಸಭೆ ನಡೆಸಲು ತೀರ್ಮಾನಿಸಿದ್ದ ನೌಕರರ ಸಂಘದ ಗೌರವಾಧ್ಯಕ್ಷ, ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌ ಅವರನ್ನು ಬಂಧನ ಕೂಡಾ ಮಾಡಲಾಗಿತ್ತು.

ಇದನ್ನೂ ಓದಿ: ‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ – ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...