Homeಕರ್ನಾಟಕಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ - ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ಸದಸ್ಯರಿಗೆ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈವರೆಗೆ ಅದನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಾರಿಗೆ ನೌಕರರಿಗೆ

ಕೊರೊನಾದಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ತಲಾ ₹30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆಬ್ರವರಿ 10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯಿದೆ ಅಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್‌ನಿಂದ 2021ರ ಜೂನ್‌ವರಗೆ ಕೊರೊನಾದಿಂದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಾವಣಗೆರೆಯ ತಾಹೀರ್ ಹುಸೈನ್ ಮತ್ತು ರಾಯಚೂರಿನ ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿರುವ ಸಾರ್ವಜನಿಕ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ವಿ ಕಾಮೇಶ್ವರ ರಾವ್‌ ಮತ್ತು ಎಸ್‌ ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಪಿ ಉಸ್ಮಾನ್‌, “ಕೋವಿಡ್‌ ಸಂದರ್ಭದಲ್ಲಿ ಸಾವನ್ನಪ್ಪಿದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ಈವರೆಗೂ ₹30 ಲಕ್ಷ ಪರಿಹಾರವನ್ನು ನೀಡಿಲ್ಲ” ಎಂದು ವಾದ ಮಂಡಿಸಿದ್ದಾರೆ. ವಾದ ಆಲಿಸಿದ ಪೀಠವು ಜನವರಿ 27ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಸಾರಿಗೆ ನೌಕರರಿಗೆ

“ಸಾರಿಗೆ ನಿಗಮಗಳ ನೌಕರರು ಕೋವಿಡ್‌ನಿಂದ ಮೃತಪಟ್ಟ ಪ್ರಕರಣಗಳ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಯಾವುದೇ ವಿಳಂಬವಿಲ್ಲದೆ ಕೂಡಲೇ ಪರಿಹಾರ ಹಣವನ್ನು ಪಾವತಿಸುವುದನ್ನು ಖಾತರಿಪಡಿಸಬೇಕು. ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು” ಎಂದು ಅರ್ಜಿದಾರರು ಹೈಕೋರ್ಟ್‌ಗೆ ಕೋರಿದ್ದಾರೆ.

ಇದನ್ನೂಓದಿ:  ಕಾಂಗ್ರೆಸ್ ನಾಯಕನೊಂದಿಗಿನ ಪಕ್ಷದ ಶಾಸಕರ ಘರ್ಷಣೆ; ಬಿಆರ್‌ಎಸ್‌ ನಾಯಕ ಕೆಟಿಆರ್ ಗೃಹಬಂಧನ

ಕಾಂಗ್ರೆಸ್ ನಾಯಕನೊಂದಿಗಿನ ಪಕ್ಷದ ಶಾಸಕರ ಘರ್ಷಣೆ; ಬಿಆರ್‌ಎಸ್‌ ನಾಯಕ ಕೆಟಿಆರ್ ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...