Homeಚಳವಳಿಪಂಜಾಬ್: ಶಿರೋಮಣಿ ಅಕಾಲಿದಳದ ಕಾರ್ಯಕ್ರಮಕ್ಕೆ ತಡೆ, ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಬಳಕೆ

ಪಂಜಾಬ್: ಶಿರೋಮಣಿ ಅಕಾಲಿದಳದ ಕಾರ್ಯಕ್ರಮಕ್ಕೆ ತಡೆ, ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಬಳಕೆ

- Advertisement -
- Advertisement -

ಪಂಜಾಬ್‌ನ ಮೊಗಾದಲ್ಲಿ ಶಿರೋಮಣಿ ಅಕಾಲಿದಳದ ಕಾರ್ಯಕ್ರಮವೊಂದಕ್ಕೆ ತಡೆಯೊಡ್ಡಲು ಬಲವಂತವಾಗಿ ಸಭೆಗೆ ನುಗ್ಗಲು ಯತ್ನಿಸಿದ ಆರೋಪದಲ್ಲಿ ರೈತರ ಮೇಲೆ ಪೊಲೀಸರು ಜಲಫಿರಂಗಿಯನ್ನು ಬಳಸಿದ್ದಾರೆ. ಜೊತೆಗೆ ಲಾಠಿಚಾರ್ಜ್ ಕೂಡ ಮಾಡಲಾಗಿದೆ.

ಮೊಗಾದಲ್ಲಿ ಗುರುವಾರ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಎಸ್‌ಎಡಿ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಇತ್ತೀಚೆಗೆ ಪಂಜಾಬ್‌ನ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ 100 ದಿನಗಳ “ಯಾತ್ರೆಯನ್ನು” ಆರಂಭಿಸಿದ್ದಾರೆ.

ಮೊಗಾದ ಧಾನ್ಯ ಮಾರುಕಟ್ಟೆಯಲ್ಲಿನ ಎಸ್‌ಎಡಿ ಕಾರ್ಯಕ್ರಮದ ಸ್ಥಳದೊಳಗೆ ಬಲವಂತವಾಗಿ ನುಗ್ಗಲು ಯತ್ನಿಸಿದ ಕೆಲವು ರೈತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ನಾವು ಅವರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದೆವು. ಆದರೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟಕ್ಕೆ ಮುಂದಾದರು ಹಾಗಾಗಿ ಅವರನ್ನು ಚದುರಿಸಲು ಪೊಲೀಸರು ಮತ್ತು ನೀರಿನ ಫಿರಂಗಿಗಳನ್ನು ಬಳಸಲಾಯಿತು ಎಂದು ಹೇಳಿದ್ದಾರೆ.

“ಅವರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು. ಕಲ್ಲುಗಳನ್ನು ಎಸೆದಾಗ, ಅವರನ್ನು ಚದುರಿಸಲು ನಾವು ಲಾಠಿ ಚಾರ್ಜ್ ಮಾಡಬೇಕಾಯಿತು. 600 ಪ್ರತಿಭಟನಾಕಾರರಲ್ಲಿ 35 ಜನರನ್ನು ಬಂಧಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಮೊಗಾದ ಪೊಲೀಸ್ ವರಿಷ್ಠಾಧಿಕಾರಿ ಧ್ರುಮಾನ್ ನಿಂಬಾಲೆ ಹೇಳಿದ್ದಾರೆ.

ಇತ್ತಿಚೆಗಷ್ಟೆ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಮಾನವೀಯ ಲಾಠಿಚಾರ್ಜ್ ಮಾಡಿದ್ದರು. 10 ಕ್ಕೂ ಹೆಚ್ಚು ರೈತರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಒರ್ವ ರೈತ ಸಾವನ್ನಪ್ಪಿದ್ದಾರೆ. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಹರಿಯಾಣ ಮತ್ತ ಪಂಜಾಬ್‌ಗಳಲ್ಲಿ ರಾಜಕಾರಣಿಗಳ ಕಾರ್ಯಕ್ರಮಗಳಿಗೆ ತಡೆಯೊಡ್ಡುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆಯಾಗುವವರೆಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...