Homeಕರ್ನಾಟಕದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

ದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

- Advertisement -
- Advertisement -

ಕಾನೂನುಗಳು ಮತ್ತು ನಿಬಂಧನೆಗಳು ಎಷ್ಟೇ ಜಾರಿಯಲ್ಲಿದ್ದರೂ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣ ಮತ್ತೆ ಮತ್ತೆ ವರದಿಯಾಗುತ್ತಿದೆ. ದಾವಣಗೆರೆ ಜಿಲ್ಲೆಯ ಕಲ್ಯಾಣ ಮಂಟಪದಲ್ಲಿ ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ನಡೆದಿದ್ದು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಆಕ್ಟ್‌ ಪ್ರಕಾರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಾವಣಗೆರೆಯ ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ. ಕೂಲಿ ಕಾರ್ಮಿಕ ಸಿದ್ದೇಶ ಎಂಬಾತನನ್ನು ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿದೆ. ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿರುವುದು ಕಂಡು ಬಂದಿದೆ. ಈ ಬಗ್ಗೆ ಕಲ್ಯಾಣ ಮಂಟಪದ ಸಿಬ್ಬಂದಿ ಮುಪ್ಪಯ್ಯರನ್ನು ವಿಚಾರಿಸಿದಾಗ ಕೂಲಿ ಕಾರ್ಮಿಕ ಸಿದ್ದೇಶ್‌ ಎಂಬಾತನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವುದಾಗಿ ಹೇಳಿದ್ದಾರೆ.

ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ ಪಿ.ಮಧುಸೂಧನ್ ಬಡಾವಣೆ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿದ್ದು, ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ್ದು ಪರಿಶೀಲನೆ ವೇಳೆ ಸಾಬೀತಾಗಿದೆ. ಆದ್ದರಿಂದ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ  ದೂರಿನಲ್ಲಿ ಆಗ್ರಹಿಸಿದ್ದಾರೆ.

ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಯ ಗಮನಕ್ಕೆ ತರದೆ ಕಾರ್ಮಿಕನಿಂದ ಸ್ವಚ್ಛತೆ ಮಾಡಿಸಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಕಾಯ್ದೆ ಹಾಗೂ ಸೆಕ್ಷನ್ 20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

2013ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಗೆ ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ. 1993ರಿಂದ 2021ರ ಅವಧಿಯಲ್ಲಿ 971 ಜನರು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಹಿತಿ ತಿಳಿಸುತ್ತದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...