Homeಮುಖಪುಟಮನೆ ಖಾಲಿ ಮಾಡಿಸಲು ಒತ್ತಾಯಿಸಿದರೆ ಕಠಿಣ ಕ್ರಮ: ಸಿಎಂ ಬಿಎಸ್‌ವೈ ಎಚ್ಚರಿಕೆ

ಮನೆ ಖಾಲಿ ಮಾಡಿಸಲು ಒತ್ತಾಯಿಸಿದರೆ ಕಠಿಣ ಕ್ರಮ: ಸಿಎಂ ಬಿಎಸ್‌ವೈ ಎಚ್ಚರಿಕೆ

- Advertisement -
- Advertisement -

ಕೊರೊನಾ ಕಾರಣಕ್ಕೆ ಬಾಡಿಗೆದಾರರನ್ನು, ವೈದ್ಯರು , ಅರೆವೈದ್ಯಕೀಯ, ಆರೋಗ್ಯ ಸಿಬ್ಬಂದಿಯನ್ನು ಮನೆ ಖಾಲಿ ಮಾಡುವಂತೆ ಒತ್ತಾಯ ಮಾಡುವ ಮನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ನಿರ್ದೇಶನ ನೀಡಿದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು, ಮುನ್ಸಿಪಲ್ ಕಾರ್ಪೊರೇಷನ್‌ಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮನೆ ಖಾಲಿ ಒತ್ತಾಯಿಸುವ ಭೂಮಾಲೀಕರು / ಮನೆ ಮಾಲೀಕರ ವಿರುದ್ಧ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಕೊರೊನಾ ಸೋಂಕಿನ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳೂ ಶ್ರಮಿಸುತ್ತಿರುವ, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಮನೆಗಳನ್ನು ಖಾಲಿ ಮಾಡಲು ಕೆಲವು ಮಾಲೀಕರು ಒತ್ತಾಯಿಸುತ್ತಿರುವ ದೂರುಗಳು ಬರುತ್ತಿವೆ. ಇದು ಸಾರ್ವಜನಿಕ ಸೇವೆ ಮಾಡುವವರ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಗಂಭೀರ ಅಪರಾಧವಾಗುತ್ತದೆ. ಮನೆಗಳ ಮಾಲೀಕರು ಯಾವುದೇ ಕಾರಣಕ್ಕೂ ಮನೆ ಖಾಲಿ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ಹರಡುತ್ತಿರುವ ಸಮಯದಲ್ಲಿ ರೋಗಿಗಳ ರಕ್ಷಣೆಗೆ ವೈದ್ಯರು ಮತ್ತು ದಾದಿಯರು ಜೀವದ ಹಂಗು ತೊರೆದು ನಿಂತಿದ್ದಾರೆ. ಆದರೆ ಅವರು ಬಾಡಿಗೆ ಮನೆಯಲ್ಲದಿದ್ದರೆ ಅದು ನಮಗೂ ಹರಡುತ್ತದೆ ಎಂಬ ಭಯದಿಂದ ಅವರನ್ನು ಅಲ್ಲಿಂದ ಖಾಲಿ ಮಾಡಿಸುತ್ತಿರುವ ಘಟನೆಗಳು ಸತತವಾಗಿ ವರದಿಯಾಗಿದ್ದವು.

ಈ ಬಗ್ಗೆ ಇಂದು ಸರ್ಕಾರ ಖಡಕ್‌ ನಿರ್ದೇಶನ ನೀಡಿದ್ದು, ವೈದ್ಯರು ಮತ್ತು ದಾದಿಯರು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೆ ಕರ್ನಾಟಕದಲ್ಲಿ ಕೊರೊನಾ ಹರಡಿರುವ ಯಾವುದೇ ವರದಿಗಳಿಲ್ಲ. ಹಾಗಿದ್ದರೂ ಅವರನ್ನು ಬಲವಂತವಾಗಿ ಮನೆಯಿಂದ ಹೊರಹಾಕುವುದು ಅಮಾನವೀಯ ಎಂಬ ಎಂದು ಹೇಳಿದೆ.

ಈ ಕುರಿತು ಸಾರ್ವಜನಿಕ ವಲಯದಲ್ಲಿಯೂ ಮನೆ ಮಾಲೀಕರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿತ್ತು. ಸರ್ಕಾರದ ಈ ಕ್ರಮ ಅತ್ಯಗತ್ಯವಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...