Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...