Homeಮುಖಪುಟಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

- Advertisement -
- Advertisement -

ಅಮೆರಿಕಾ ಮೂಲದ ಖ್ಯಾತ ವಾಹನ ತಯಾರಿಕಾ ಕಂಪೆನಿ ಫೋರ್ಡ್‌​​ ಮೋಟಾರ್ಸ್‌ ಭಾರತದಲ್ಲಿ ತನ್ನ ಉತ್ಪಾದಕ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ನಂತರ ಭಾರತದಲ್ಲಿ ಉತ್ಪಾದನಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿರುವ ಅಮೆರಿಕಾದ ಮೂರನೇ ವಾಹನ ತಯಾರಕ ಕಂಪೆನಿಯಾಗಿದೆ ಫೋರ್ಡ್‌​ ಮೋಟಾರ್ಸ್!.

ಫೋರ್ಡ್‌​ ಮೋಟಾರ್ಸ್‌ಗೆ ಗುಜರಾತ್(ಸನಂದ್) ಹಾಗೂ ತಮಿಳುನಾಡಿ(ಚೆನ್ನೈ)ನಲ್ಲಿ ಎರಡು ಉತ್ಪಾದಕ ಘಟಕಗಳಿವೆ. ಈ ಎರಡೂ ಘಟಕಗಳು ಬಂದ್ ಆಗಲಿವೆ ಎಂದು ಕಂಪೆನಿ ಹೇಳಿದೆ. ಭಾರತದಲ್ಲಿ ಕಂಪನಿಯು 2 ಬಿಲಿಯನ್ ಡಾಲರ್​ನಷ್ಟು ನಷ್ಟವನ್ನು ಅನುಭವಿಸಿದೆ, ಹೀಗಾಗಿ ಭಾರತದಿಂದ ನಾವು ಹೊರ ಹೋಗುತ್ತಿದ್ದೇವೆ ಎಂದು ಫೋರ್ಡ್‌​ ಹೇಳಿದೆ. ಕಂಪೆನಿಯು ಈ ಹಿಂದೆ ಭಾರತದ ಎರಡು ಘಟಕಗಳಲ್ಲಿ ಸುಮಾರು 2.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿತ್ತು.

ಇದನ್ನೂ ಓದಿ: ಉದ್ಯೋಗ ನಷ್ಟದ ಪರಿಣಾಮ ಚಿನ್ನದ ಮೇಲಿನ ಸಾಲದಲ್ಲಿ ಶೇ. 77ರಷ್ಟು ಹೆಚ್ಚಳ

ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಗುಜರಾತ್‌ನ ಘಟಕದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿದರೆ, 2022 ರ ಎರಡನೆ ತ್ರೈಮಾಸಿಕದಲ್ಲಿ ತಮಿಳುನಾಡಿನ ಘಟಕದಲ್ಲೂ ತನ್ನ ಕಾರ್ಯಾಚರಣೆಯನ್ನು ಫೋರ್ಡ್‌​ ನಿಲ್ಲಿಸಲಿದೆ ಎಂದು ಕಂಪೆನಿ ಹೇಳಿದೆ.

ಭಾರತದ ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿದ್ದರಿಂದ ಅಮೆರಿಕಾದ ಕಂಪೆನಿಗಳಾದ ಜನರಲ್ ಮೋಟಾರ್ಸ್ ಮತ್ತು ಹಾರ್ಲೆ ಡೇವಿಡ್ಸನ್ ಕಂಪೆನಿಗಳು ಈ ಹಿಂದೆಯೆ ಭಾರತವನ್ನು ತೊರೆದಿದ್ದವು. ಇದೀಗ ಫೋರ್ಡ್‌​ ಕೂಡಾ ತನ್ನ ಉತ್ಪಾದನೆಯನ್ನು ನಿಲ್ಲಿಸಲು ಮುಂದಾಗಿದೆ.

ವಿಶ್ವದ ಐದನೇ ಅತಿದೊಡ್ಡ ಕಾರು ತಯಾರಕ ಕಂಪೆನಿಯಾಗಿರುವ ಫೋರ್ಡ್‌​, ಭಾರತವನ್ನು ಪ್ರವೇಶಿಸಿದ ಮೊದಲ ಪ್ರಮುಖ ಜಾಗತಿಕ ಆಟೋ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಇದು 1 ಬಿಲಿಯನ್‌ ಡಾಲರ್‌ನ ಆರಂಭಿಕ ಹೂಡಿಕೆಯೊಂದಿಗೆ 1996 ರಲ್ಲಿ ಆರಂಭಗೊಂಡಿತ್ತು. ತನ್ನ ಉದ್ಯಮ ಉತ್ತುಂಗದಲ್ಲಿ ಇದ್ದಾಗ ಕಂಪೆನಿಯು ಭಾರತದಲ್ಲಿ 14,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿತ್ತು. ಪ್ರಸ್ತುತ ಕಂಪೆನಿಯು ಭಾರತದ ಮಾರುಕಟ್ಟೆಯಿಂದ ಹೊರಹೋಗುತ್ತಿರುವುದರಿಂದ ಸುಮಾರು 4,000 ಉದ್ಯೋಗಗಳು ನಷ್ಟವಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...