Homeಮುಖಪುಟವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

- Advertisement -
- Advertisement -

ಮೇ 10 ರಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಂಡ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳ ಮೇಲೆ ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ನಡೆಸುತ್ತಿರುವ ಆನ್‌ಲೈನ್ ಟ್ರೋಲಿಂಗ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಿಸ್ರಿ ಅವರ ಮಗಳ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಖಂಡಿಸಿದ್ದಾರೆ. ಇದು “ತೀವ್ರ ಬೇಜವಾಬ್ದಾರಿ ಕೃತ್ಯ” ಮತ್ತು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ “ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಕರೆದಿದೆ.

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ರಹತ್ಕರ್ ಒತ್ತಿ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಥಳಗಳಲ್ಲಿ ಸಂಯಮ ಮತ್ತು ಗೌರವಕ್ಕಾಗಿ ಕರೆ ನೀಡಿರುವ ಅವರು, ನಾಗರಿಕರು ಅಂತಹ ನಡವಳಿಕೆಯನ್ನು ಮೀರಿ ನಿಲ್ಲುವಂತೆ ಒತ್ತಾಯಿಸಿದ್ದಾರೆ. “ನಾವು ಘನತೆ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಆರಿಸಿಕೊಳ್ಳೋಣ” ಎಂದು ರಹತ್ಕರ್ ಹೇಳಿದ್ದಾರೆ.

ಈ ನಡುವೆ ಮಿಸ್ರಿ ಅವರ ಕುಟುಂಬದ ಪರವಾಗಿ ಹಿರಿಯ ರಾಜತಾಂತ್ರಿಕ ನಿರುಪಮಾ ಮೆನನ್ ರಾವ್ ಮತ್ತು ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ ಮತ್ತು ಅಖಿಲೇಶ್ ಯಾದವ್ ಧ್ವನಿಯೆತ್ತಿದ್ದಾರೆ.

“ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಅವರ ಕುಟುಂಬವನ್ನು ಟ್ರೋಲ್ ಮಾಡುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ನಿರುಪಮಾ ಮೆನನ್ ರಾವ್ ಅವರು ಹೇಳಿದ್ದಾರೆ.

ಒಬ್ಬ ಸಮರ್ಪಿತ ರಾಜತಾಂತ್ರಿಕರಾಗಿರುವ ಮಿಶ್ರಿ ಅವರು ವೃತ್ತಿಪರತೆ ಮತ್ತು ದೃಢಸಂಕಲ್ಪದಿಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ಅವರನ್ನು ದೂಷಣೆ ಮಾಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ.

“ಅವರ ಮಗಳ ವೈಯಕ್ತಿಕ ಮಾಹಿತಿಯನ್ನು ಹುಡುಕುವುದು ಮತ್ತು ಅವರ ಪ್ರೀತಿಪಾತ್ರರನ್ನು ನಿಂದಿಸುವುದು ಎಲ್ಲಾ ಸಭ್ಯತೆಯ ಗೆರೆಯನ್ನು ಮೀರುತ್ತದೆ. ಈ ವಿಷಕಾರಿ ದ್ವೇಷದ ನಡುವೆ, ನಮ್ಮ ರಾಜತಾಂತ್ರಿಕ ಮಿಸ್ತಿ ಅವರ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು, ಅವರನ್ನು ಕೆಡವಬಾರದು. #StopTrollingMisri #SupportDiplomats #VikramMisri #IndianDiplomacy #NoToDoxxing,” ಎಂದು ರಾವ್ ಪೋಸ್ಟ್ ಮಾಡಿದ್ದರು. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...