Homeಕರ್ನಾಟಕಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ಧದ ಅರಣ್ಯ ಒತ್ತುವರಿ ಆರೋಪ : ಜ.15ರೊಳಗೆ ಸರ್ವೆ ಮುಗಿಸಲು...

ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ಧದ ಅರಣ್ಯ ಒತ್ತುವರಿ ಆರೋಪ : ಜ.15ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ತಾಕೀತು

- Advertisement -
- Advertisement -

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಹೊಸ ಹುಡ್ಯ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದ ಸರ್ವೆ ನಂಬರ್‌ 1 ಮತ್ತು 2ರಲ್ಲಿ 61.39 ಎಕರೆ ಒತ್ತುವರಿ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿಗದಿತ ಜಂಟಿ ಸರ್ವೆ ಕಾರ್ಯವನ್ನು ಜನವರಿ 15ರೊಳಗೆ ನಡೆಸಲೇಬೇಕು ಎಂದು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ತಾಕೀತು ಮಾಡಿದೆ.

ಶ್ರೀನಿವಾಸಪುರ ತಾಲೂಕಿನ ಕುಂದಿಟಿವಾರಪಲ್ಲಿ ನಿವಾಸಿಯೂ ಆದ ವಕೀಲ ಕೆ.ವಿ ಶಿವಾರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ಈ ಆದೇಶ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪದಾಂಕಿತ ಹಿರಿಯ ವಕೀಲ ವೈ.ಆರ್‌.ಸದಾಶಿವ ರೆಡ್ಡಿ ಅವರ ವಾದ ಮಾನ್ಯ ಮಾಡಿದ ನ್ಯಾಯಪೀಠ, ಹೈಕೋರ್ಟ್‌ ಈ ಮೊದಲು ನೀಡಿರುವ ಆದೇಶದ ಅನುಸಾರ; ಜಿಲ್ಲಾಧಿಕಾರಿ, ಭೂ ದಾಖಲೆಗಳ ಉಪ ನಿರ್ದೇಶಕ (ಡಿಡಿಎಲ್‌ಆರ್‌) ಮತ್ತು ಅರಣ್ಯ ಒತ್ತುವರಿ ಆರೋಪ ಎದುರಿಸುತ್ತಿರುವ ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ ಕುಮಾರ್ ಆಗಲೀ ಅಥವಾ ಅವರ ಅಧಿಕೃತ ಪ್ರತಿನಿಧಿಯಾಗಲೀ ಜಂಟಿ ಸರ್ವೆ ಕಾರ್ಯದಲ್ಲಿ ಭಾಗವಹಿಸಬೇಕು. ಈ ಸಂಬಂಧ ರಮೇಶ್ ಕುಮಾರ್ ಅವರಿಗೆ ಜಿಲ್ಲಾಧಿಕಾರಿ ನೋಟಿಸ್ ಕೊಡಬೇಕು ಎಂದು ಸೂಚಿಸಿದೆ.

ಒಂದು ವೇಳೆ ರಮೇಶ್‌ ಕುಮಾರ್ ಆಗಲೀ ಅಥವಾ ಅವರ ಅಧಿಕೃತ ಪ್ರತಿನಿಧಿಯಾಗಲೀ ಸರ್ವೆ ಕಾರ್ಯದಲ್ಲಿ ಭಾಗವಹಿಸದೇ ಹೋದಲ್ಲಿ ಸರ್ವೆ ಕಾರ್ಯವನ್ನು ಮುಂದುವರಿಸಬೇಕು. ಅಂತೆಯೇ, ಸರ್ವೆ ನಡೆಸಿದ ನಂತರ ನೀಡಲಾಗುವ ವರದಿಯನ್ನು ಆಕ್ಷೇಪಿಸಲಾಗಲೀ ಅಥವಾ ಸ್ಥಿರಾಸ್ತಿ ಬಾಧ್ಯತೆಯ ಕ್ಲೇಮು ಮಾಡಲು ರಮೇಶ್‌ ಕುಮಾರ್ ಅವರಿಗೆ ಯಾವುದೇ ಅಧಿಕಾರ ಇರುವುದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಒತ್ತುವರಿ ಕುರಿತಂತೆ 14 ವರ್ಷದ ಹಿಂದೆಯೇ ಸರ್ವೇ ಕಾರ್ಯ ಕೈಗೊಳ್ಳಲು ಆದೇಶಿಸಲಾಗಿದ್ದರೂ, ಅದನ್ನು ಇನ್ನೂ ಕಾರ್ಯಗತಗೊಳಿಸದೇ ಇರುವುದು ಆಘಾತಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯ ಪೀಠ, ಸರ್ವೇ ಕಾರ್ಯದ ವರದಿಯನ್ನು ಜನವರಿ 30 ಅಥವಾ ಅದಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಿ ಸಲ್ಲಿಸಬೇಕು ಎಂದು ಅರಣ್ಯ ಉಪಸಂರಕ್ಷಣಾಧಿಕಾರಿಗೆ (ಡಿಸಿಎಫ್‌) ನಿರ್ದೇಶಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಬೆಂಗಳೂರು ವಕೀಲರ ಸಂಘದಲ್ಲಿ ಶೇ.33 ಮಹಿಳಾ ಮೀಸಲಾತಿ ಕೋರಿ ಅರ್ಜಿ : ಎಎಬಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....