Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...