HomeಅಂಕಣಗಳುKarnataka SIRಫಾರ್ಮ್-7 ಆಕ್ಷೇಪಣೆ; ಈವರೆಗೆ ಯಾವ ಮತದಾರರ ಹೆಸರನ್ನೂ ಕೈಬಿಟ್ಟಿಲ್ಲ ಎಂದ ಅನ್ಬುಕುಮಾರ್

ಫಾರ್ಮ್-7 ಆಕ್ಷೇಪಣೆ; ಈವರೆಗೆ ಯಾವ ಮತದಾರರ ಹೆಸರನ್ನೂ ಕೈಬಿಟ್ಟಿಲ್ಲ ಎಂದ ಅನ್ಬುಕುಮಾರ್

- Advertisement -
- Advertisement -

ಫಾರ್ಮ್-7 ಮೂಲಕ ಅರ್ಹ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ತಕ್ಷಣ ಮತದಾರರ ಹೆಸರು ಸ್ವಯಂಚಾಲಿತವಾಗಿ ಡಿಲೀಟ್ ಆಗುವುದಿಲ್ಲ. ಇಆರ್‌ಒಗಳ ಕಡ್ಡಾಯ ಪರಿಶೀಲನೆ, ಅರ್ಜಿ ಕೊಟ್ಟವರಿಗೆ ನೋಟೀಸ್ ಮತ್ತು ವಿಚಾರಣೆ ನಡೆಸಿದ ನಂತರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಯಾರಾದರೂ ಮತದಾರರ ಪಟ್ಟಿಯಿಂದ ತಪ್ಪಾಗಿ ಕೈಬಿಟ್ಟುಹೋಗಿದ್ದಲ್ಲಿ, ಅವರನ್ನು ಮತ್ತೆ ಪಟ್ಟಿಗೆ ಸೇರಿಸಲಾಗುವುದು; ಇದರ ಬಗ್ಗೆ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

“ಅಕ್ಟೋಬರ್ 27 ಕ್ಕೆ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುವುದು, ಅಲ್ಲಿವರೆಗೆ ಮತದಾರರ ಹೆಸರು ಸೇರಿಸುವುದು ಮತ್ತು ತೆಗೆಯುವ ಪ್ರಕ್ರಿಯೆ ಮಾಡಲಾಗುತ್ತದೆ. ನೋಟಿಸ್ ಪಡೆದವರು ವಿಚಾರಣೆಗೆ ಹಾಜರಾಗದೆ ಇದ್ದರೆ, ಬಿಎಲ್‌ಒಗಳು ಅವರ ಮನೆಗೆ ತೆರಳಿ ವಿಚಾರಣೆ ನಡೆಸಿ, ಮತದಾರರ ಮಾಹಿತಿ ಪಡೆದು ಇಆರ್‌ಒಗಳಿಗೆ ಸಲ್ಲಿಸುತ್ತಾರೆ. ಎಲ್ಲ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಮತ್ತೆ ಸೇರ್ಪಡೆ ಮಾಡುತ್ತೇವೆ” ಎಂದರು.

ಫಾರ್ಮ್‌ 7 ಕೊಟ್ಟ ತಕ್ಷಣ ಹೆಸರು ಡಿಲೀಟ್‌ ಮಾಡಲ್ಲ

“ಫಾರ್ಮ್‌ 7 ಕೊಟ್ಟ ತಕ್ಷಣ ಹೆಸರು ಡಿಲೀಟ್‌ ಮಾಡಲ್ಲ; ಆಕ್ಷೇಪಣೆ ಕೊಟ್ಟ ವ್ಯಕ್ತಿಗಳ ವಿಚಾರಣೆ ಬಳಿಕ ಇಆರ್‌ಒ ಕ್ರಮ ತೆಗೆದುಕೊಳ್ಳುತ್ತಾರೆ. ಈ ಕುರಿತು ಎಲ್ಲ ಇಆರ್‌ಒಗಳಿಗೆ ಸೂಚನೆ ನೀಡಲಾಗಿದೆ. ಆಕ್ಷೇಪಣೆ ಕೊಟ್ಟ ಕಾರಣಕ್ಕೆ ಈವರೆಗೆ ಯಾವ ಮತದಾರ ಹೆಸರನ್ನೂ ಕೈಬಿಟ್ಟಿಲ್ಲ. ಸುಳ್ಳು ಆರೋಪ ಮಾಡಿದವರ ಮೇಲೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಎಫ್‌ಐಆರ್‌ ಆಗಿರುವ ಈ ಸಂದರ್ಭದಲ್ಲಿ ಆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ದಿನವೊಂದಕ್ಕೆ ಒಬ್ಬರು 10 ಫಾರ್ಮ್ 7 ಕೊಡಬಹುದು; ಒಬ್ಬರು ಒಟ್ಟು 50 ಫಾರ್ಮ್ ಮಾತ್ರ ಕೊಡಲು ಅವಕಾಶವಿದೆ. ಅದಕ್ಕಿಂತಲೂ ಹೆಚ್ಚಿನ ಫಾರ್ಮ್‌ಗಳನ್ನು ಕೊಟ್ಟರೆ ಇಆರ್‌ಒ ತಿರಸ್ಕರಿಸುತ್ತಾರೆ. ಅರ್ಜಿ ಕೊಟ್ಟವರ ಉದ್ದೇಶ ಸುಳ್ಳು ಎಂದು ಸಾಬೀತಾದರೆ ಇಆರ್‌ಒ ಕ್ರಮ ತೆಗೆದುಕೊಳ್ಳುತ್ತಾರೆ; ಅವರು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ನಿರ್ದೇಶನ ನೀಡಲು ಸಾಧ್ಯವಿಲ್ಲ. ಆಕ್ಷೇಪಣೆ ಸುಳ್ಳು ಎಂದಾದರೆ ಕಾನೂನು ಪ್ರಕಾರ ಅವರು ಕ್ರಮ ತೆಗೆದುಕೊಳ್ಳಬಹುದು. ನೋಟಿಸ್‌ ಕೊಟ್ಟ ಬಳಿಕ 7 ದಿನಗಳ ಅವಕಾಶ ಇರುತ್ತದೆ. ಇಆರ್‌ಒಗಳು ಸ್ವತಂತ್ರ ಅಧಿಕಾರಿಗಳಾಗಿದ್ದು, ಅವರ ಪರಮಾಧಿಕಾರ ಬಳಸಿ ಕ್ರಮ ತೆಗೆದುಕೊಳ್ಳಬಹುದು. ಯಾವುದೇ ವ್ಯಕ್ತಿ ಫಾರ್ಮ್‌ 7 ಮೂಲಕ ಸುಳ್ಳು ಮಾಹಿತಿ ನೀಡಿದರೆ ಕ್ರಮ ತೆಗೆದುಕೊಳ್ಳಬಹುದು ಎಂದು ಫಾರ್ಮ್‌ನಲ್ಲೇ ಘೋಷಣೆ ಇದೆ. ಆದ್ದರಿಂದ, ಕ್ರಮ ತೆಗೆದುಕೊಳ್ಳಲು ಇಆರ್‌ಗಳಿಗೆ ಪರಮಾಧಿಕಾರ ಇದೆ” ಎಂದರು.

“ಈವರೆಗೆ ಎಷ್ಟು ಫಾರ್ಮ್ 7 ಸಲ್ಲಿಕೆಯಾಗಿವೆ ಎಂಬ ಅಂಕಿ ಅಂಶಗಳು ನಮ್ಮಲ್ಲಿ ಇಲ್ಲ; ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದಿದೆ. ಹೆಸರು ಡಿಲೀಟ್‌ ಮಾಡಿ ಎಂದು ವ್ಯಕ್ತಿಗೆ ಸಬಂಧಿಸಿದವರು ಅರ್ಜಿ ಸಲ್ಲಿಸಲು ಅವಕಾಶ ಇದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ಮಾಡುವಾಗ 2025 ರ ಪಟ್ಟಿ ಹಾಗೂ ಹೊಸದಾಗಿ ತಯಾರಿಸಿದ ಎಸ್‌ಐಆರ್ ಪಟ್ಟಿಯಲ್ಲಿ ಯಾರದ್ದಾದರೂ ಹೆಸರು ಇಲ್ಲದೇ ಇದ್ದರೆ, ಅವರ ಹೆಸರು ಬೇರೆ ಕ್ಷೇತ್ರದಲ್ಲಿ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಫಾರ್ಮ್ 6 ಕೊಡಬೇಕು” ಎಂದರು.

16-06-2026 ರಿಂದ 04-10-2026 ರವರೆಗೆ ಚುನಾವಣಾ ಆಯೋಗ ಸ್ವೀಕರಿಸಿರುವ ಅರ್ಜಿಗಳು

ಫಾರ್ಮ್‌ 6 – 9,10,732

ಫಾರ್ಮ್‌ 6ಎ – 4,677

ಫಾರ್ಮ್‌ 7 – 91,278

ಫಾರ್ಮ್‌ 8 – 11,98,484

ಒಟ್ಟು ಅರ್ಜಿಗಳು – 22,05,171

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಮುಸ್ಲೀಮರನ್ನು ಗುರಿಯಾಗಿಸಿ ತೀರ್ಥಹಳ್ಳಿಯಲ್ಲಿ 81 ಮತದಾರರ ಹೆಸರು ಅಳಿಸಲು ಬಿಜೆಪಿ ಮುಖಂಡರ ಮನವಿ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿರುವ ನಡುವೆಯೇ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸುರುಳಿ ಬಾಳೆಬೈಲು ಗ್ರಾಮದಲ್ಲಿ 81 ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ಅಳಿಸುವಂತೆ ಬಿಜೆಪಿ...

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಪ್ರಕರಣ: ಬಿಜೆಪಿ ನಾಯಕ ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ಮೋಸದಿಂದ ಡಿಲೀಟ್ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಡಾ. ರವಿ ಬಸಲಿಂಗಪ್ಪಗೌಡ ಪಾಟೀಲ್ ಅವರಿಗೆ ಕರ್ನಾಟಕದ ಬೆಳಗಾವಿಯ...

‘ಚುನಾವಣಾ ಆಯೋಗದ ನಿರ್ಧಾರಗಳು ಸರ್ವಾನುಮತದಿಂದಲೇ ಆಗಬೇಕು’: ಗ್ಯಾನೇಶ್ ಕುಮಾರ್ ಪ್ರಕರಣದಲ್ಲಿ ಆಯೋಗಕ್ಕೆ ಸುಪ್ರೀಂ ನೋಟಿಸ್

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗದ ಮಹತ್ವದ ನಿರ್ಧಾರಗಳನ್ನು ಏಕಪಕ್ಷೀಯವಾಗಿ ಕೈಗೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು...

ಎಸ್‌ಐಆರ್; ಮತದಾರರ ಪಟ್ಟಿ ಅಕ್ರಮದಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ನಾರಿಮನ್ ಕಳವಳ

ದೇಶದಲ್ಲಿ ಜಾರಿಯಲ್ಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಅಡಿಯಲ್ಲಿ ಲಕ್ಷಾಂತರ ನಾಗರಿಕರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದರಿಂದ "ಪ್ರಜಾಪ್ರಭುತ್ವ ಹಾಗೂ ನಾಗರಿಕರ ಮತದಾನದ ಹಕ್ಕು ತೀವ್ರ ಅಪಾಯದಲ್ಲಿದೆ" ಎಂದು...

ಕಡೂರಿನಲ್ಲಿ 30 ಅರ್ಹ ಮತದಾರರ ಹೆಸರು ಅಳಿಸಲು ಫಾರಂ-7 ಸಲ್ಲಿಕೆ: ಮಾಜಿ ಕೌನ್ಸಿಲರ್ ಮತ್ತು ಬಿಜೆಪಿಯ ಸದಸ್ಯ ಮೋಹನ್ ಕುಮಾರ್ ವಿರುದ್ಧ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ರಾಜ್ಯಾದ್ಯಂತ ತೀವ್ರಗೊಂಡಿವೆ. ಇದರ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ...

ಮಹಾರಾಷ್ಟ್ರದ ಆಶ್ರಮ ಶಾಲೆಗಳಲ್ಲಿ ಆದಿವಾಸಿ ವಿದ್ಯಾರ್ಥಿಗಳ ಸರಣಿ ಸಾವು ಖಂಡಿಸಿ ಬೃಹತ್ ಪ್ರತಿಭಟನೆ: ಎನ್‌ಎಸ್‌ಯುಐ ಅಧ್ಯಕ್ಷ ಸೇರಿ ಹಲವರ ಬಂಧನ, ಪೊಲೀಸ್ ಕ್ರಮದ ವಿರುದ್ಧ ಆಕ್ರೋಶ!

ಮಹಾರಾಷ್ಟ್ರದ ಸರ್ಕಾರಿ ಹಾಗೂ ಅನುದಾನಿತ ಆಶ್ರಮ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಮತ್ತು ಭದ್ರತಾ ಲೋಪ ಖಂಡಿಸಿ ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬುಡಕಟ್ಟು ಕ್ಷೇಮಾಭಿವೃದ್ಧಿ...

ಬಿಜೆಪಿ ನಾಯಕರ ದ್ವೇಷ ಭಾಷಣ, ಹಿಂಸಾಚಾರ, ಜಾಮಿಯಾ ಪೊಲೀಸ್ ದೌರ್ಜನ್ಯ: ಸ್ವತಂತ್ರ ತನಿಖೆ ಕೋರಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

ನವದೆಹಲಿ: 2020ರ ಈಶಾನ್ಯ ದೆಹಲಿ ಹಿಂಸಾಚಾರ, 2019ರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪೊಲೀಸ್ ಹಿಂಸಾಚಾರ ಹಾಗೂ ಹಿಂಸಾಚಾರಕ್ಕೂ ಮುನ್ನ ನಡೆದಿದ್ದ ಎನ್ನಲಾದ ದ್ವೇಷ ಭಾಷಣಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು...

ದೆಹಲಿ ಎಸಿಪಿ ಮೇಲಿನ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಯುವತಿ ಸೇರಿದಂತೆ 18 ಮಂದಿ ಪೊಲೀಸ್ ವಶಕ್ಕೆ

ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ತಮ್ಮ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎಂದು ಆರೋಪಿಸಿರುವ ಯುವತಿ ಸೇರಿದಂತೆ 18 ಜನರನ್ನು ದೆಹಲಿ ಪೊಲೀಸರು ಸೋಮವಾರ (ಅ.5) ವಶಕ್ಕೆ ಪಡೆದಿದ್ದಾರೆ. ಆರೋಪಿತ ಅಧಿಕಾರಿಯ ವಿರುದ್ಧ...

ಬಾಗಲಕೋಟೆಯಲ್ಲಿ ಅಸ್ಪೃಶ್ಯತೆ ಆಚರಣೆ; ದೇವಸ್ಥಾನದಲ್ಲಿ ದಲಿತರಿಗೆ ಪ್ರತ್ಯೇಕ ಊಟ

ಬಾಗಲಕೋಟೆ ಜಿಲ್ಲೆಯಲ್ಲಿ ದೇವಸ್ಥಾನದ ಜಾತ್ರೆಯೊಂದರಲ್ಲಿ ದಲಿತ ಸಮುದಾಯದ ಭಕ್ತರಿಗೆ ಪ್ರತ್ಯೇಕ ಊಟ ಬಡಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಇದು ಅಸ್ಪೃಶ್ಯತೆಗೆ ಸಂಬಂಧಿಸಿದ ವಿವಾದಕ್ಕೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಈ ಘಟನೆ...

ಕ್ಯಾಂಪಸ್ ಹಿಂಸಾಚಾರದ ಬೆನ್ನಲ್ಲೇ SRFTI ಬಳಿ ರ್ಯಾಲಿ: ವಿದ್ಯಾರ್ಥಿಗಳಿಂದ ಕೇಂದ್ರ ಸಚಿವರಿಗೆ ತುರ್ತು ರಕ್ಷಣೆಯ ಮನವಿ

ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (SRFTI)ಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ಬೆನ್ನಲ್ಲೇ, ಸಂಸ್ಥೆಯ ಸಮೀಪ ಹಿಂದೂ ಜಾಗರಣ್ ಮಂಚ್ ರ್ಯಾಲಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು...