Homeಕರ್ನಾಟಕಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಸಮಿತಿ ರಚಿಸಿ : ಸಿಎಂಗೆ FIRE ಆಗ್ರಹ

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಸಮಿತಿ ರಚಿಸಿ : ಸಿಎಂಗೆ FIRE ಆಗ್ರಹ

- Advertisement -
- Advertisement -

ಲೈಂಗಿಕ ಹಿಂಸೆ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ’ (FIRE) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ FIRE “ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದೆ. ಅದೇ ರೀತಿ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಒಂದು ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದೆ.

ಲೈಗಿಂಕ ಕಿರುಕುಳ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ(ಕೆಎಫ್‌ಐ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಸಮಿತಿ ರಚಿಸಬೇಕು. ಅದರ ವರದಿ ಆಧರಿಸಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು. ಚಿತ್ರೋದ್ಯಮದಲ್ಲಿ ಎಲ್ಲಾ ಮಹಿಳೆಯರಿಗೆ ಸುರಕ್ಷಿತವಾದ ಮತ್ತು ನ್ಯಾಯಯುತವಾದ ವಾತಾವರಣ ಸೃಷ್ಟಿಸಲು ನಿಯಮಗಳನ್ನು ರೂಪಿಸಬೇಕು ಎಂದು FIRE ಪತ್ರದಲ್ಲಿ ಮನವಿ ಮಾಡಿದೆ.

ಸರ್ಕಾರ ಸಮಿತಿ ರಚಿಸಿದರೆ, ಅದು ಮೂರು ತಿಂಗಳ ಒಳಗಾಗಿ ವರದಿ ನೀಡಬೇಕು. ಆ ವರದಿಯನ್ನು ಶೀಘ್ರವಾಗಿ ಸಾರ್ವಜನಿಕಗೊಳಿಸಬೇಕು. ವರದಿ ತಯಾರಿಸಲು ಮತ್ತು ಮುಂದಿನ ತನಿಖೆಗೆ ಬೇಕಾದ ಸಹಾಯ ಮಾಡಲು FIRE ಸಿದ್ದವಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಸಿಎಂಗೆ ಬರೆದಿರುವ ಪತ್ರಕ್ಕೆ ನಿರ್ದೇಶಕಿ ಹಾಗೂ FIRE ಅಧ್ಯಕ್ಷೆ ಕವಿತಾ ಲಂಕೇಶ್, ನಟಿಯರಾದ ಶ್ರುತಿ ಹರಿಹರನ್, ರಮ್ಯಾ, ಐಂದ್ರಿತಾ ರೈ, ಅಕ್ಷತಾ ಪಾಂಡವಪುರ, ಅಮೃತ ಅಯ್ಯಂಗಾರ್, ಚೈತ್ರಾ ಆಚಾರ್, ಮಾನ್ವಿತಾ ಕಾಮತ್, ಮೇಘನಾ ಗಾಂವ್ಕರ್, ಪೂಜಾ ಗಾಂಧಿ, ಕುಶಿ ರವಿ, ನಟರಾದ ಸುದೀಪ್, ವಿನಯ್ ರಾಜ್‌ಕುಮಾರ್, ಕಿಶೋರ್, ಹೋರಾಟಗಾರ್ತಿ ನಜ್ಮಾ ನಜೀರ್, ಪತ್ರಕರ್ತ ಬಿಎಂ ಬಶೀರ್, ಸಾಹಿತಿ ರಹಮತ್ ತರೀಕೆರೆ ಸೇರಿದಂತೆ 153 ನಟ, ನಟಿಯರು, ಕಲಾವಿದರು, ಸಾಹಿತಿಗಳು, ಹೋರಾಟಗಾರರು, ಸಂಘಟನಾ ಪ್ರಮುಖರು ಸಹಿ ಹಾಕಿದ್ದಾರೆ.

ಕೇರಳದಲ್ಲಿ 2017ರಲ್ಲಿ ಪ್ರಮುಖ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಳಿಕ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಸರ್ಕಾರ ನ್ಯಾಯಮೂರ್ತಿ ಹೇಮಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯಗಳ ಕುರಿತು ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದೆ.

ವರದಿ ಬಹಿರಂಗೊಂಡ ಬಳಿಕ ಅನೇಕರು ನಟಿಯರು ತಮ್ಮ ಮೇಲೆ ನಡೆದ ದೌರ್ಜನ್ಯಗಳ ಕುರಿತು ಹೇಳಿಕೊಂಡಿದ್ದಾರೆ. ಕೆಲವರು ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಮಲಯಾಳಂ ಸಿನಿಮಾ ರಂಗದ ಹಲವು ಪ್ರಮುಖ ನಟ, ನಿರ್ದೇಶಕರ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...