Homeಕರ್ನಾಟಕಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ದಲಿತ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್‌, ಬೆಟ್ಟಯ್ಯ ಕೋಟೆ, ಶಂಭುಲಿಂಗ ಸ್ವಾಮಿ ಮೊದಲಾದವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ, ಆರೋಪಿಯನ್ನು ಬಂಧಿಸಿಲ್ಲ. ಗೃಹ ಸಚಿವರು ಮಾತನಾಡುತ್ತಾ, ಸ್ವಾಮೀಜಿ ಸತ್‌ಚಾರಿತ್ರ್ಯ ಹೊಂದಿದ್ದಾರೆ ಅನ್ನುವ ಮೂಲಕ ಪ್ರಕರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈಗಾಗಲೇ ಆರೋಪಿ ಸ್ವಾಮೀಜಿಗೆ ಕ್ಲಿನ್ ಚೀಟ್ ಕೊಟ್ಟಿದ್ದಾರೆ. ಕಾನೂನಿನ ಮುಂದೆ ಎಲ್ಲ ಸಮಾನರು. ಮುಖ್ಯಮಂತ್ರಿಯಾದಿಯಾಗಿ ಅನೇಕರು ಆರೋಪಿಯ ರಕ್ಷಣೆಗೆ ನಿಂತಿರುವುದರಿಂದ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಮುರುಘಾ ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಎಂದಿದ್ದಾರೆ. ದೂರು ನೀಡಿರುವ ಅಪ್ರಾಪ್ತರು ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯರಾಗಿದ್ದು, ಇವರು ಯಾರ ಬಳಿ ಸಂಧಾನ ಮಾಡುತ್ತಾರೆ. ಯಾರ ವಿರುದ್ಧ ಯುದ್ಧ ಮಾಡ್ತಾರೆ ಎಂದು ಪ್ರಶ್ನಿಸಿದರು.

ಅಪ್ರಾಪ್ತರಿಂದ ತನಿಖೆ ನಡೆಸುವಾಗ ಅನುಸರಿಬೇಕಾದ ವಿಧಿ ವಿಧಾನಗಳನ್ನು ಚಿತ್ರದುರ್ಗದ ಪೊಲೀಸರು ಅನುಸರಿಸುತ್ತಿಲ್ಲ. ಸ್ಥಳ ಮಹಜರು ಮಾಡಲು ಬಾಲಕಿಯರನ್ನು ಮಠದ ಆಡಳಿತ ಮಂಡಳಿಯ ಎದುರಿನಲ್ಲಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಬಾಲಕಿಯರು ಭಯ-ಭೀತಿಗೊಂಡಿದ್ದಾರೆ. ಬಾಲಕಿಯರಿಗೆ ಭಯ ಮುಕ್ತವಾಗಿ ತನಿಖೆ ನಡೆಸಿಕೊಂಡಿಲ್ಲ. ಹೀಗಾಗಿ ಪೊಲೀಸರು ನಡೆದುಕೊಂಡ ರೀತಿಯಲ್ಲಿ ಅನುಮಾನವಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಬಲವಾಗಿದೆ. ಆದರೆ, ಸ್ವಾಮೀಜಿ ಪ್ರಕರಣದಲ್ಲಿ ಕಾಯ್ದೆಯನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಹೀಗಾಗಿ ನ್ಯಾಯ ದೊರೆಯುವ ವಿಶ್ವಾಸವೇ ಕಳೆದು ಹೋಗಿದೆ. ಚಿತ್ರದುರ್ಗ ಜಿಲ್ಲಾಡಳಿತ ಮತ್ತು ತನಿಖಾಧಿಕಾರಿಗಳು ಅನುಸರಿಸುತ್ತಿರುವ ಧೋರಣೆ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಅಲ್ಲಿನ ಜಿಲ್ಲಾಡಳಿತ ಬಗ್ಗೆ ನ್ಯಾಯ ಸಿಗುವ ವಿಶ್ವಾಸ ಕಾಣುತ್ತಿಲ್ಲ. ಈಗಲಾದರೂ ಸರ್ಕಾರ ಕೂಡಲೇ ಆರೋಪಿಯನ್ನು ಬಂಧಿಸಿ ಎಸ್ ಐಟಿ ತನಿಖಾ ತಂಡ ರಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

‘ಒಡನಾಡಿಗೆ ಮಕ್ಕಳನ್ನು ಕರೆತನ್ನಿ’

ಚಿತ್ರದುರ್ಗಾದಲ್ಲಿರುವ ಮಕ್ಕಳನ್ನು ಸುರಕ್ಷಿತ ದೃಷ್ಟಿಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸಬೇಕು. ಹೀಗಾಗಿ ಮೈಸೂರಿಗೆ ಕರೆ ತಂದು ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಇರಿಸಬೇಕು. ಮಕ್ಕಳಿಗೆ ದಲಿತ ಸಂಘರ್ಷ ಸಮಿತಿ ಕೂಡ ಬೆಂಬಲವಾಗಿ ನಿಲ್ಲುವುದು. ಈ ಪ್ರಕರಣದ ಸಂಬಂಧ ಎಲ್ಲ ಪಕ್ಷಗಳು ಜನಪ್ರತಿನಿಧಿಗಳು ಓಟು ರಾಜಕಾರಣ ಬಿಟ್ಟು ಮಾತನಾಡಬೇಕು. ಆ ಮೂಲಕ ನ್ಯಾಯದ ಪರವಾಗಿ ನಿಂತು ತಮ್ಮ ಬದ್ಧತೆ ಮೆರೆಯಬೇಕು ಎಂದು ಗುರುಪ್ರಸಾದ್ ಕೆರೆಗೋಡು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ಅಪ್ರಾಪ್ತ ಬಾಲಕಿಯರು ಷಡ್ಯಂತ್ರ ರೂಪಿಸಲು ಸಾಧ್ಯವೇ? ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿದ್ದಾರೆ. ಆದರೆ, ಸ್ವಾಮೀಜಿಗೆ ವೈದ್ಯಕೀಯ ಪರೀಕ್ಷೆ ನಡೆಯದೆ ಇರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಸೂಚನೆಯಾಗಿದೆ. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ ತೀವ್ರ ಚಳವಳಿ ಎದುರಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ದೊರೆಕಿಸುವ ನಿಟ್ಟಿನಲ್ಲಿ ಪ್ರಗತಿಪರ, ರೈತ ಹಾಗೂ ದಲಿತ ಮತ್ತು ವಿವಿಧ ಸಮುದಾಯಗಳ ಸಂಘಟನೆಗಳು ಹೋರಾಟ ರೂಪಿಸುವ ನಿಟ್ಟಿನಲ್ಲಿ ಆ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್‌. ಐ.ಟಿ. ರಚನೆಗಾಗಿ ಸರ್ಕಾರವನ್ನು ನಂಬಿ ಕೂರಬಾರದು. ನ್ಯಾಯಾಂಗದ ಮೊರೆ ಹೋಗಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...