ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಭ್ರಷ್ಟಾಚಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರದ ಮೂಡಾ ವಿವಾದ ಸೇರಿದಂತೆ ಹಲವು ತನಿಖೆಗಳ ಮೇಲ್ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ. ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ.
“ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರಾದ ಪರಮೇಶ್ವರ್, ಎಚ್‌ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ” ಎಂದು ಮುಖ್ಯಮಂತ್ರಿಗಳ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರಾದ @DrParameshwara, @HKPatilINC, @krishnabgowda, @PriyankKharge ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ… pic.twitter.com/PDN2v64dRq
— CM of Karnataka (@CMofKarnataka) September 10, 2024
ಸಚಿವರ ಸಮಿತಿ
- ಡಾ. ಜಿ.ಪರಮೇಶ್ವರ- ಗೃಹ ಸಚಿವರು.
- ಎಚ್.ಕೆ. ಪಾಟೀಲ– ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
- ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
- ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
- ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು.
ಇದನ್ನೂ ಓದಿ; ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು


