Homeಕರ್ನಾಟಕಒಳಮೀಸಲಾತಿಗೆ ಆಯೋಗ ರಚನೆ ವಿಳಂಬ ನೀತಿ ಅಲ್ಲ : ಸಿಎಂ ಸಿದ್ದರಾಮಯ್ಯ

ಒಳಮೀಸಲಾತಿಗೆ ಆಯೋಗ ರಚನೆ ವಿಳಂಬ ನೀತಿ ಅಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು ರಾಜ್ಯದಲ್ಲಿ ಒಳಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಆ್ಯಕ್ಟ್‌ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ” ಎಂದು ತಿಳಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗದಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಶಕ್ತಿ ಯೋಜನೆ’ ಪರಿಷ್ಕರಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...