Homeಮುಖಪುಟಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಬಿಜೆಪಿಗೆ ಸೇರ್ಪಡೆ

ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಮಾಜಿ ವಾಯುಪಡೆ ಮುಖ್ಯಸ್ಥ ಆರ್‌ಕೆಎಸ್ ಬದೌರಿಯಾ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್‌ಕೆಎಸ್ ಬದೌರಿಯಾ ಅವರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ.

ರಫೇಲ್ ಫೈಟರ್ ಜೆಟ್‌ನ್ನು ಹಾರಿಸಿದ ಮೊದಲ ಭಾರತೀಯ ವಾಯುಪಡೆಯ ಅಧಿಕಾರಿಗಳಲ್ಲಿ ಭದೌರಿಯಾ ಕೂಡ ಒಬ್ಬರು ಮತ್ತು ಜೆಟ್‌ಗಳಿಗಾಗಿ ಫ್ರಾನ್ಸ್‌ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

ಭದೌರಿಯಾ ಅವರು ಸೆಪ್ಟೆಂಬರ್ 2019ರಿಂದ ಸೆಪ್ಟೆಂಬರ್ 2021ರವರೆಗೆ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು ವಾಯುಪಡೆ ಸಿಬ್ಬಂದಿ ವಿಭಾಗದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಭದೌರಿಯಾ ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಅವರು 4,250 ಗಂಟೆಗಳ ಕಾಲ ಪೈಟರ್‌ ಜೆಟ್‌ಗಳ ಹಾರಾಟವನ್ನು ಮಾಡಿದ್ದಾರೆ ಮತ್ತು 26 ವಿವಿಧ ರೀತಿಯ ಫೈಟರ್‌ಗಳನ್ನು ಹಾರಿಸಿದ ಅನುಭವವನ್ನು ಹೊಂದಿದ್ದಾರೆ.

ಭದೌರಿಯಾ ಅವರು ಮಾರ್ಚ್ 2017ರಿಂದ ಆಗಸ್ಟ್ 2018ರವರೆಗೆ ಸದರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದರು. ಅವರು ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಮತ್ತು ತರಬೇತಿ ಕಮಾಂಡ್ ಆಗಿ ಸೇವೆ ಸಲ್ಲಿಸಿದ್ದರು.

ವೃತ್ತಿಜೀವನದ 36 ವರ್ಷಗಳ ಅವಧಿಯಲ್ಲಿ, RKS ಭದೌರಿಯಾ ಅವರಿಗೆ ಹಲವಾರು ಪದಕಗಳನ್ನು ನೀಡಲಾಗಿದೆ. ಅತಿ ವಿಶಿಷ್ಟ ಸೇವಾ ಪದಕ, ವಾಯು ಸೇನಾ ಪದಕ ಮತ್ತು ಪರಮ ವಿಶಿಷ್ಟ ಸೇವಾ ಪದಕವನ್ನು ಕೂಡ ಅವರು ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಳಿಕ ಬಿಜೆಪಿ ಸೇರ್ಪಡೆಗೊಂಡಿದ್ದರು. ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ರಾಜಕೀಯ ಎಂಟ್ರಿ ಭಾರೀ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗಂಗೋಪಾಧ್ಯಾಯ ಅವರು ಸಾಂವಿಧಾನಿಕ ಹುದ್ದೆಯಿಂದ ಪಕ್ಷ ರಾಜಕೀಯಕ್ಕೆ ಪ್ರವೇಶಿಸಿದ್ದ ಮೊದಲ ನ್ಯಾಯಾಧೀಶರಲ್ಲ. ಆದರೆ ನ್ಯಾಯಾಂಗದಿಂದ ರಾಜಕೀಯಕ್ಕೆ ಪರಿವರ್ತನೆಗೊಳ್ಳುವ ರೀತಿ, ಪೀಠಕ್ಕೆ ರಾಜೀನಾಮೆ ನೀಡುವ ಮೊದಲು ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಘೋಷಿಸುವುದು, ನ್ಯಾಯಾಧೀಶರಾಗಿದ್ದಾಗ ಬಂಗಾಳದ ಆಡಳಿತ ಪಕ್ಷದ ವಿರುದ್ಧ ಮಾಡಿರುವ ಟೀಕೆ ನ್ಯಾಯಾಂಗ ನಿಷ್ಪಕ್ಷಪಾತದ ಪ್ರಶ್ನೆ ಉದ್ಭವಿಸಲು ಕಾರಣವಾಗಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...