Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...