ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸೌಜನ್ಯದ ನಡವಳಿಕೆ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಾಧಾನಪಡಿಸಲು ಪ್ರಯತ್ನಿಸಿದ್ದರು. ನಂತರ ಬೋರಾ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದರು. ಈ … Continue reading ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ