Homeಮುಖಪುಟಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪ್ರಕರಣದಿಂದ ದೆಹಲಿ ನ್ಯಾಯಾಲಯ ಸೋಮವಾರದಂದು ವಜಾ ಮಾಡಿದೆ. ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಅದು ಹೇಳಿದೆ. ಸೆಂಗಾರ್ ಅವರಲ್ಲದೆ, ಅವರ ಸಹಾಯಕರಾದ ಜ್ಞಾನೇಂದ್ರ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ ಅವರನ್ನು ಕೂಡ ಪ್ರಕರಣದಿಂದ ವಜಾ ಮಾಡಲಾಗಿದೆ.

ಆದಾಗ್ಯೂ, ಇತರ ನಾಲ್ವರು ಆರೋಪಿಗಳಾದ ಆಶಿಶ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ನ್ಯಾಯಾಲಯ ಆದೇಶಿಸಿದೆ. ಈ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ:ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಸಂತ್ರಸ್ತೆ ಅಥವಾ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಯನ್ನು ವಿಸ್ತರಿಸುವ ಕ್ರಿಮಿನಲ್ ಪಿತೂರಿಯ ಬಗ್ಗೆ ಕುಲದೀಪ್ ಸಿಂಗ್ ಸಿಂಗರ್ ವಿರುದ್ಧ ಆರೋಪ ಮಾಡಲು ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಆಗಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವು 2019 ರ ಜುಲೈ 28 ರಂದು ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲರು ಮತ್ತು ಇಬ್ಬರು ಸಂಬಂಧಿಕರು ರಾಯ್ ಬರೇಲಿಗೆ ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದೆ. ಅತ್ಯಾಚಾರ ಸಂತ್ರಸ್ತೆ ಮತ್ತು ವಕೀಲರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಂಬಂಧಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಸೆಂಗರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ:ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದಕ್ಕೂ ಮೊದಲು, ಅವರು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರಲ್ಲಿ ಅಪರಾಧಿ ಎಂದು ಸಾಬೀತಾಗಿತ್ತು. ಅವರಿಗೆ ಜೀವಿತಾವಧಿ ಜೈಲು ಶಿಕ್ಷೆಯನ್ನು ವಿಧಿಸಲಾಯಿತು ಮತ್ತು ರೂ 25 ಲಕ್ಷ ದಂಡವನ್ನು ಹಾಕಲಾಗಿತ್ತು.

ಉನ್ನಾವೋದ ಬಂಗಾರ್‌ಮೌ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸೆಂಗಾರ್ ವಿರುದ್ದ 2017 ರಲ್ಲಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿತ್ತು.

2020 ರ ಮಾರ್ಚ್ ತಿಂಗಳಲ್ಲಿ, ವಿಶೇಷ ನ್ಯಾಯಾಲಯವು 2018 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಸೆಂಗಾರ್, ಅವರ ಸಹೋದರ ಅತುಲ್ ಸಿಂಗ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಕುಲದೀಪ್ ಸೆಂಗಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದ್ದು, ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಅವರನ್ನು ವಿಧಾನಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ:ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...