Homeಮುಖಪುಟಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

- Advertisement -
- Advertisement -

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೆಗಾಸಸ್ ಕಣ್ಗಾವಲು ಪ್ರಕರಣಕ್ಕೆ ಒಳಗಾದವರ ಹೆಸರನ್ನು ದಿನೇ ದಿನೇ ಬಿಡುಗಡೆ ಮಾಡುತ್ತಿರುವ ದಿ ವೈರ್ ಇಂದು ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ ಕೂಡ ಪೆಗಾಸಸ್ ಪಟ್ಟಿಯಲ್ಲಿದ್ದರು ಎಂಬ ಅಂಶವನ್ನು ಬಹಿರಂಗಪಡಿಸಿದೆ.

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ ಮತ್ತು ಮಾಜಿ ಹೆಚ್ಚುವರಿ ಎಕೆ ಶರ್ಮಾ ಕೂಡ ಕಣ್ಗಾವಲು ಪಟ್ಟಿಯಲ್ಲಿದ್ದಾರೆ ಎಂದು ದಿ ವೈರ್ ಹೇಳಿದೆ. ಈ ಹೆಸರುಗಳು 2018ರ ಸಂದರ್ಭದಲ್ಲಿ ಕಣ್ಗಾವಲು ಪಟ್ಟಿಗೆ ಸೇರಿಸಲಾಗಿದೆ ಎನ್ನಲಾಗಿದೆ.

2018ರ ಅಕ್ಟೋಬರ್‌ನಲ್ಲಿ ಸಿಬಿಐ ಒಳಗೆ ಬಣ ರಾಜಕೀಯ ನಡೆಯುತ್ತಿತ್ತು. ಆಗ ಅಲೋಕ್ ವರ್ಮಾರವರು ರಾಕೇಶ್ ಅಸ್ಥಾನ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಗಿದೆ ಎಂದು ವೈರ್ ತಿಳಿಸಿದೆ. ಆಗ ಅವರಿಬ್ಬರೂ ತಮ್ಮ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಲೋಕ್ ವರ್ಮಾರವರ ಕುಟುಂಬ ಸದಸ್ಯರ ಫೋನ್‌ ನಂಬರ್‌ಗಳನ್ನು ಕೂಡ ಪಟ್ಟಿಗೆ ಸೇರಿಸಲಾಗಿದೆ. ವರ್ಮಾರವರ ಹೆಂಡತಿ, ಮಗಳು, ಅಳಿಯ, ಸೇರಿದಂತೆ ಒಟ್ಟು 8 ಕುಟುಂಬ ಸದಸ್ಯರ ಹೆಸರನ್ನು ಸೇರಿಸಲಾಗಿದೆ. ಕೆಲ ಸಮಯದ ನಂತರ ಈ ಮೊಬೈಲ್ ಸಂಖ್ಯೆಗಳನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಅದೇ ರೀತಿಯಲ್ಲಿ ಅನಿಲ್ ಅಂಬಾನಿ ಮತ್ತು ಅವರ ಉದ್ಯೋಗಿ ಟೋನಿ ಜೆಸುಡಾನ್ ಹಾಗೂ ಫ್ರೆಂಚ್ ಕಂಪನಿ ಡಸಾಲ್ಟ್ ಏವಿಯೇಷನ್‌ನ ಭಾರತದ ಪ್ರತಿನಿಧಿ ವೆಂಕಟ ರಾವ್ ಪೊಸಿನಾ ಅವರ ಸಂಖ್ಯೆಯೂ ಕಣ್ಗಾವಲು ಪಟ್ಟಿ ಸೇರಿದೆ ಎಂದು ವೈರ್ ತಿಳಿಸಿದೆ.

ರಫೇಲ್ ಜೆಟ್‌ಗಳನ್ನು ಖರೀದಿಸಲು ಡಸಾಲ್ಟ್‌ನೊಂದಿಗೆ ಭಾರತ ಸರ್ಕಾರವು ಮಾಡಿಕೊಂಡ ಒಪ್ಪಂದದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಾದ ಕೂಡಲೇ ಅವರ ನಂಬರ್‌ಗಳನ್ನು ಪಟ್ಟಿಗೆ ಸೇರಿಸಲಾಗಿದೆ ಎಂದು ವೈರ್ ಹೇಳಿದೆ. 2018 ರಿಂದ 2019ರವರೆಗೆ ಹಲವು ಉದ್ಯೋಗಿಗಳ ಸಂಖ್ಯೆಗಳನ್ನು ಸೇರಿಸಲಾಗಿದೆ.

ಸಿಬಿಐ ಮಾಜಿ ನಿರ್ದೇಶಕರಾದ ಅಲೋಕ್‌ ವರ್ಮಾರವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಏಕೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...