Homeಕರ್ನಾಟಕಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಅತ್ಯಂತ ಹಿಂದುಳಿದ ಈಡಿಗ ಸಮುದಾಯದವರಾದ ಜಾಲಪ್ಪ ಅವರು ಒಕ್ಕಲಿಗ ಸಮುದಾಯದ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ನಿರಂತರ ಗೆಲವು ಸಾಧಿಸಿದ ಜನಪ್ರತಿನಿಧಿಯಾಗಿದ್ದರು.

- Advertisement -
- Advertisement -

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ಅವರು ಶುಕ್ರವಾರ ನಿಧನರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು. ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರ್‌.ಎಲ್‌.ಜಾಲಪ್ಪ ಅವರು 19, ಅಕ್ಟೋಬರ್‌ 1925ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಜನಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದರು.

ಒಂದಿಷ್ಟು ವಯಸ್ಸಾದ ಮೇಲೆ ರಾಜಕಾರಣಕ್ಕೆ ಬಂದವರು ಜಾಲಪ್ಪ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ಎಂಎಲ್‌ಎ ಆಗಿ ಆಯ್ಕೆಯಾಗಿ ಸಂಚಲನ ಮೂಡಿಸಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಸೋಲು ಕಂಡಿದ್ದರು.

ಜಾಲಪ್ಪ ಅವರು ಈಡಿಗ ಸಮುದಾಯಕ್ಕೆ ಸೇರಿದವರು. ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ನಂತರ ಶಾಸಕರಾಗಿ ಗೆದ್ದರು. ದೇವರಾಜ ಅರಸು ಅವರಿಗೆ ಆಪ್ತರಾಗಿದ್ದರು. ಅರಸು ಅವರ ಜೊತೆಯಲ್ಲಿ ಮೊದಲು ಕಾಂಗ್ರೆಸ್‌ನಲ್ಲಿದ್ದರು. ನಂತರ ಅರಸು ಅವರು ಕರ್ನಾಟಕ ಕ್ರಾಂತಿ ರಂಗ ಪಕ್ಷ ಕಟ್ಟಿದಾಗ ಜಾಲಪ್ಪ ಅವರೂ ಕ್ರಾಂತಿರಂಗ ಸೇರಿದರು. ಕ್ರಾಂತಿರಂಗ ಜನತಾ ಪಾರ್ಟಿಯೊಂದಿಗೆ ವಿಲೀನವಾಯಿತು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಾಲಪ್ಪ ಅವರು ಒಮ್ಮೆಯೂ ಸೋಲಲಿಲ್ಲ. ಇಂದಿರಾಗಾಂಧಿಯವರ ಕೊಲೆಯಾದ ಮೇಲೆ ನಡೆದ 1985ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾತ್ರ ಸೋಲು ಕಂಡರು. 1996ರಲ್ಲಿ ಮತ್ತೆ ಲೋಕಸಭಾ ಚುನಾವಣೆಗೆ ನಿಂತು ಗೆದ್ದರು. ಸತತ ನಾಲ್ಕು ಬಾರಿ ಲೋಕಸಭೆಗೆ ಪುನರಾಯ್ಕೆಯಾದರು. ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಜೆ.ಜೆ.ಪಾಟೇಲ್‌, ಎಸ್.ಆರ್‌.ಬೊಮ್ಮಾಯಿ ಅವರ ನಂತರದ ಸ್ಥಾನದಲ್ಲಿ ಜಾಲಪ್ಪ ಅವರ ಹೆಸರಿತ್ತು.

ಕೊಲೆ ಆಪಾದನೆ; ರಾಜಕೀಯ ಹಿನ್ನೆಡೆ

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಜಾಲಪ್ಪ ಅವರು ಗೃಹ ಸಚಿವರಾಗಿದ್ದರು. ಈ ಅವಧಿಯಲ್ಲಿ ರಶೀದ್ ಎಂಬ ವಕೀಲರ ಕೊಲೆಯಾಯಿತು. ಜಾಲಪ್ಪ ಅವರ ಸೂಚನೆ ಮೇರೆಗೆ ಕೊಲೆಯಾಗಿದೆ ಎಂದು ಸುದ್ದಿಯಾಯಿತು. ಆಗ ಇವರು ರಾಜೀನಾಮೆ ಕೊಡಬೇಕಾಗಿ ಬಂತು. ಸಿಬಿಐ ಅರೆಸ್ಟ್ ಮಾಡಿತ್ತು. ಈ ಕಾರಣದಿಂದಾಗಿ ಒಂದಿಷ್ಟು ಕಾಲ ಜಾಲಪ್ಪ ಅವರ ವರ್ಚಸ್ಸು ಕುಗ್ಗಿತು.

ಹಿಂದುಳಿದ ಜಾತಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮೆಡಿಕಲ್‌ ಕಾಲೇಜುಗಳನ್ನು ಈ ಸಮುದಾಯಗಳಿಗೆ ನೀಡಿದ್ದರು. ದೇವರಾಜ ಅರಸು ಹಿಂದುಳಿದ ವರ್ಗಗಳ ಟ್ರಸ್ಟ್‌ ರಚಿಸಿ, ಆ ಟ್ರಸ್ಟ್‌ಗೆ ಒಂದು ಮೆಡಿಕಲ್ ಕಾಲೇಜು ನೀಡಿದರು. ಈ ಟ್ರಸ್ಟ್‌ ವಿಚಾರದಲ್ಲೇ ವಿವಾದ ಉಂಟಾಗಿ ವಕೀಲ ರಶೀದ್‌ ಅವರ ಕೊಲೆಯಾಯಿತು ಎನ್ನಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜೀನಾಮೆ ನೀಡಿದ್ದರು

ಜಾಲಪ್ಪ ಅವರು ಲೋಕಸಭೆಗೆ ಆಯ್ಕೆಯಾದ ಅವಧಿಯಲ್ಲೇ ದೇವೇಗೌಡರು ಪ್ರಧಾನಿಯಾದರು. ಈ ಅವಧಿಯಲ್ಲಿ ಜಾಲಪ್ಪ ಜವಳಿ ಖಾತೆಯ ರಾಜ್ಯ ಸಚಿವರನ್ನಾಗಿ ಮಾಡಿದರು. ಸೀನಿಯರ್‌ ಆಗಿದ್ದರಿಂದ ಸಂಪುಟ ದರ್ಜೆಯಲ್ಲಿ ಸಚಿವನಾಗುತ್ತೇನೆ ಎಂದು ಜಾಲಪ್ಪ ಭಾವಿಸಿದ್ದರು. ಆದರೆ ರಾಜ್ಯ ಖಾತೆ ಸ್ಥಾನಮಾನ ಸಿಕ್ಕಿತ್ತು. ಬೇರೆ ದಾರಿ ಇಲ್ಲದೇ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸಿ ಕೆಳಗೆ ಇಳಿದು ಬಂದವರೇ ದೇವೇಗೌಡರಿಗೆ ರಾಜೀನಾಮೆ ನೀಡಿದ್ದರು. ದೇವೇಗೌಡರು ಎರಡು ದಿನಗಳ ನಂತರ ಜಾಲಪ್ಪ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ಮಾಡಿದರು. ಮುಂದೆ ಜನತಾದಳ ಬಿಟ್ಟು ಕಾಂಗ್ರೆಸ್‌ ಸೇರಿದರು.

ಒಕ್ಕಲಿಗರ ಪ್ರಾಬಲ್ಯ ಕ್ಷೇತ್ರದಲ್ಲಿ ಬೆಳೆದ ಈಡಿಗ ನಾಯಕ

ಚುನಾವಣೆಯಲ್ಲಿ ಜಾತಿ ಪ್ರಾಬಲ್ಯ ಅಗತ್ಯ. ಜಾಲಪ್ಪ ಅವರ ವಿಶೇಷವೇನೆಂದರೆ ಒಕ್ಕಲಿಗ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬಂದ ಈಡಿಗ ಸಮುದಾಯದ ವ್ಯಕ್ತಿಯಾಗಿದ್ದರು. ಕರಾವಳಿ ಭಾಗದಲ್ಲಾದರೆ ಈಡಿಗರು ಪ್ರಾಬಲ್ಯ ಹೊಂದಿದ್ದಾರೆ. ಆದರೆ ದೊಡ್ಡಬಳ್ಳಾಪುರ ಭಾಗದಲ್ಲಿ ಈಡಿಗರ ಸಂಖ್ಯೆ ತೀರಾ ಕಡಿಮೆ. ತುಂಬಾ ಹಿಂದುಳಿದ ಸಮಾಜದಿಂದ ಬಂದು, ಎಲ್ಲರನ್ನೂ ಎದುರಿಸಿ ನಿಂತು ರಾಜಕಾರಣ ಮಾಡಿದ ವ್ಯಕ್ತಿ ಜಾಲಪ್ಪ.

ಅಹಿಂದದಲ್ಲಿ ಮುಂಚೂಣಿ

ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಶುರುವಾಗಿ ಮೊದಲ ಸಮ್ಮೇಳನ ಕೋಲಾರದಲ್ಲಿ ನಡೆಯಿತು. ಈ ಸಮ್ಮೇಳನದ ಉದ್ಘಾಟನೆ ಮಾಡಿದ್ದು ಸಿದ್ದರಾಮಯ್ಯನವರಾದರೆ, ಅಧ್ಯಕ್ಷತೆ ವಹಿಸಿದ್ದು ಜಾಲಪ್ಪ. ಅಹಿಂದ ವಿಚಾರದಲ್ಲಿ ಕಡೆಯವರೆಗೂ ಜಾಲಪ್ಪ ಅವರಿಗೆ ನಿಷ್ಠೆ, ಒಲವು ಇತ್ತು.

ಜಾಲಪ್ಪ ಅವರಿಗೆ ಹಿಂದುಳಿದ ವರ್ಗಗಳ ಪರ ಒಲವಿತ್ತು. ಸಿದ್ದರಾಮಯ್ಯನವರು ಸಿಎಂ ಆಗಬೇಕೆಂಬುದು ಅವರ ಆಸೆಯಾಗಿತ್ತು. ಜಾಲಪ್ಪ ಅವರು ರಾಜಕಾರಣದಲ್ಲಿ ಶುದ್ಧ ಹಸ್ತರೆಂದು ಹೇಳಲಾಗದಿದ್ದರೂ ಕೋಟಿ ಕೋಟಿ ಸಂಪಾದಿಸಿದ ವ್ಯಕ್ತಿಯೇನೂ ಆಗಿರಲಿಲ್ಲ. ಮುಖ್ಯವಾಹಿನಿ ರಾಜಕಾರಣದಲ್ಲಿ ಇತರರಿಗಿಂತ ಭಿನ್ನವಾಗಿದ್ದರು ಜಾಲಪ್ಪ.

ಸಿದ್ದರಾಮಯ್ಯ, ಬೊಮ್ಮಾಯಿ ಸಂತಾಪ

ಜಾಲಪ್ಪ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಇವರ‌ ಸಾವಿನಿಂದ ನನ್ನ‌ ಕುಟುಂಬದ ಸದಸ್ಯನಂತಿದ್ದ, ನನ್ನ ಹಿತೈಷಿ ಮತ್ತು‌ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ದು:ಖದಲ್ಲಿ‌ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಆರ್ ಎಲ್ ಜಾಲಪ್ಪ ಅವರು ರಾಜ್ಯ ರಾಜಕಾರಣದ ಹಿರಿಯ ಮುಖಂಡರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಮುಖಿ ಕೆಲಸ ಮಾಡಿದ್ದರು. ಜಾಲಪ್ಪ ಅವರ ನಿಧನದಿಂದ ರಾಜ್ಯದ ಸಾತ್ವಿಕ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...