ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ದೃಢಪಡಿಸಿದ್ದಾರೆ.
“ನನ್ನ ಕೊರೊನಾ ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದಿದ್ದಾರೆ.
I have tested positive for COVID-19. I request everyone who came in close contact with me over the last few days to isolate themselves and get tested.
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.— H D Kumaraswamy (@hd_kumaraswamy) April 17, 2021
ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧು ಕೊರೊನಾಗೆ ಬಲಿ, 80 ಸಾಧುಗಳಿಗೆ ಸೋಂಕು ದೃಢ
ಮಾರ್ಚ್ 31 ರಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ಚೇತರಿಸಿಕೊಂಡಿದ್ದು, ಈಗ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೋಂಕು ದೃಢಪಟ್ಟಿದೆ.
ಶುಕ್ರವಾರವಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶನಿವಾರ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ರಾಜಕೀಯ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಉಪಚುನಾವಣೆಯ ಕ್ಷೇತ್ರಗಳಲ್ಲಿ ಸುತ್ತಾಡಿದ್ದಾರೆ. ಚುನಾವಣಾ ಪ್ರಚಾರ ರ್‍ಯಾಲಿಗಳನ್ನು ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ


