Homeಮುಖಪುಟಮಾಜಿ ಸಿಎಂ, ಪಂಜಾಬ್ ಲೋಕ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್‌ಗೆ ಸೋಲು

ಮಾಜಿ ಸಿಎಂ, ಪಂಜಾಬ್ ಲೋಕ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್‌ಗೆ ಸೋಲು

ಆಪ್‌ನ ಅಜಿತ್ ಪಾಲ್ ಸಿಂಗ್ ಕೊಹ್ಲಿ ಎದುರು 13 ಸಾವಿರ ಮತಗಳ ಅಂತರದಿಂದ ಸೋಲೊಪ್ಪಿದ್ದಾರೆ.

- Advertisement -
- Advertisement -

ಮಾಜಿ ಸಿಎಂ, ಪಂಜಾಬ್ ಲೋಕ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್‌ ಪಂಜಾಬ್ ವಿಧಾನಸಭೆಯ ಪಟಿಯಾಲ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಆಪ್‌ನ ಅಜಿತ್ ಪಾಲ್ ಸಿಂಗ್ ಕೊಹ್ಲಿ ಎದುರು 13 ಸಾವಿರ ಮತಗಳ ಅಂತರದಿಂದ ಸೋಲೊಪ್ಪಿದ್ದಾರೆ.

2021ರಲ್ಲಿ ಕಾಂಗ್ರೆಸ್ ಅಮರಿಂದರ್‌ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ಅವರು ಪಕ್ಷ ತ್ಯಜಿಸಿದ್ದರು. ನಂತರ ತಮ್ಮದೆ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆಗಿನ ಮೈತ್ರಿಯೊಂದಿಗೆ ಚುನಾವಣೆ ಎದುರಿಸಿದ್ದರು.

ಒಟ್ಟು 117 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷವು 90 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ ದಾಪುಗಾಲು ಇಟ್ಟಿದೆ. ಇನ್ನು ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದ್ದು ಕೇವಲ 18 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇನ್ನುಳಿದಂತೆ ಅಕಾಲಿ ದಳ ಮೈತ್ರಿ 06 ಕ್ಷೇತ್ರಗಳಲ್ಲಿ, ಬಿಜೆಪಿ ಮೈತ್ರಿ 02 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಎಲ್ಲಾ ಎಕ್ಸಿಟ್ ಪೋಲ್‌ಗಳು ಸಹ ಆಪ್ ಅಧಿಕಾರಕ್ಕೆ ಬರುತ್ತವೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಅದನ್ನು ಮೀರಿಸಿ ಆಪ್ ಭರ್ಜರಿ ಜಯದತ್ತ ಮುನ್ನುಗಿದೆ. ಆ ಮೂಲಕ ದೆಹಲಿ ನಂತರ ಪೂರ್ಣ ಪ್ರಮಾಣದ ರಾಜ್ಯವೊಂದರಲ್ಲಿ ಅಧಿಕಾರ ಹಿಡಿದ ಹೆಗ್ಗಳಿಕೆಯತ್ತ ಮುನ್ನುಗ್ಗಿದೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಆಪ್‌ಗೆ ಭರ್ಜರಿ ಮುನ್ನಡೆ – ಹಿನ್ನಡೆ ಅನುಭವಿಸುತ್ತಿರುವ ಸಿಎಂ ಚನ್ನಿ, ನವಜೋತ್ ಸಿಧು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...