Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...