Homeಕರ್ನಾಟಕತಿಹಾರ್ ಜೈಲಿನಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ತಿಹಾರ್ ಜೈಲಿನಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

- Advertisement -
- Advertisement -

ಸಮ್ಮಿಶ್ರ ಸರ್ಕಾರ ಇನ್ನೇನು ಬಿದ್ದೇ ಹೋಗುತ್ತದೆ ಎಂದಾಗ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಿಗೆ ನಿಂತವರು, ಸರ್ಕಾರ ಉಳಿಸಲು ತೀವ್ರ ಪ್ರಯತ್ನಪಟ್ಟವರು ಕನಕಪುರ ಬಂಡೆ ಡಿ.ಕೆ.ಶಿವಕುಮಾರ್. ಈಗ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜೈಲಿಗೆ ಹೋದ ನಂತರ ಇದೇ ಮೊದಲ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ, ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಸಹೋದರ ಡಿ.ಕೆ.ಸುರೇಶ್ ಅವರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದ್ದಾರೆ. ಡಿಕೆಶಿ ಭೇಟಿಗೆ ಎಲ್ಲರಿಗೂ ಅನುಮತಿ ನೀಡಿಲ್ಲ. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಸುರೇಶ್, ಡಿಕೆಶಿ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ.

ಇನ್ನು ನವೆಂಬರ್ 12 ಕ್ಕೆ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆಗೆ ಮತದಾನ ನಡೆಯಲಿದ್ದು, ಈ ವಿಷಯವಾಗಿಯೂ ಇಬ್ಬರು ನಾಯಕರು ಚರ್ಚಿಸಿದ್ದಾರೆ. ಅಕ್ಟೋಬರ್ 20ರಿಂದಲೇ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಎಲ್ಲರೂ ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಈಗಾಗಲೇ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತ ಇಡಿ ಸಮನ್ಸ್ ರದ್ದು ಕೋರಿ ಡಿಕೆಶಿ ತಾಯಿ ಗೌರಮ್ಮಾ ಹಾಗೂ ಪತ್ನಿ ಉಷಾ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...