Homeಕರ್ನಾಟಕಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು.

- Advertisement -
- Advertisement -

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಕಿರಣ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿರುವ ರೆಡ್ಡಿ ಮಾರ್ಚ್ 12 ರಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. 2014ರಲ್ಲಿ ರಾಜ್ಯವನ್ನು ವಿಭಜಿಸಿ ತೆಲಂಗಾಣವನ್ನು ರಚಿಸುವ ಮೊದಲು, ಅಂದರೆ ಅವರು ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ಬಿಜೆಪಿಗೆ ಸೇರ್ಪಡೆಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿರಣ್ ರೆಡ್ಡಿ, ‘ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ಊಹಿಸಿರಲಿಲ್ಲ. ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪತನಕ್ಕೆ ಪಕ್ಷದ ಉನ್ನತ ನಾಯಕತ್ವವೇ ಕಾರಣ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಉನ್ನತ ನಾಯಕರು ಜನರೊಂದಿಗೆ ಸಂವಹನ ನಡೆಸುವುದಿಲ್ಲ, ನಾಯಕರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವುದಿಲ್ಲ. ದುಃಖಕರ ವಿಚಾರವೆಂದರೆ ಅವರು ಯಾವನ್ನೂ ತಿದ್ದಿಕೊಳ್ಳಲು ಆಸಕ್ತಿ ಹೊಂದಿಲ್ಲ. ತಪ್ಪು ನಡೆದಿದ್ದರೆ ಅದನ್ನು ಒಪ್ಪಿಕೊಂಡು ಸರಿಪಡಿಸುವ ಪ್ರಯತ್ನ ಮಾಡಬೇಕು. ಕಾಂಗ್ರೆಸ್‌ನಲ್ಲಿ ಅಂತಹದ್ದೇನೂ ಇಲ್ಲ ಎಂದು ದೂರಿದ್ದಾರೆ.

“ಬಿಜೆಪಿ ರಾಷ್ಟ್ರದ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬದ್ಧತೆಯಿಂದ ನಾನು ಪ್ರೇರಿತನಾಗಿದ್ದೇನೆ” ಎಂದು ಕಿರಣ್ ರೆಡ್ಡಿ ಹೇಳಿಕೊಂಡಿದ್ದಾರೆ.

ಮುಂದಿನ ವರ್ಷ ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ರೆಡ್ಡಿ ರಾಜೀನಾಮೆ ನೀಡಿದ್ದು, ಅಲ್ಲಿ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ನಾಯಕತ್ವಕ್ಕಾಗಿ ಪೈಪೋಟಿ ನಡೆಸುತ್ತಿವೆ.

ಈ ವಾರ ಬಿಜೆಪಿ ಸೇರಿದ ಎರಡನೇ ಕಾಂಗ್ರೆಸ್ ನಾಯಕ ರೆಡ್ಡಿಯವರಾಗೊದ್ದಾರೆ. ಗುರುವಾರ ಮಾಜಿ ಕಾಂಗ್ರೆಸ್ ನಾಯಕ ಅನಿಲ್ ಆಂಟೋನಿ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಟೀಕಿಸಿದ ನಂತರ ಆಂಟನಿಯವರು ಜನವರಿ ದಿನಗಳಲ್ಲಿ ಕಾಂಗ್ರೆಸ್ ತೊರೆದಿದ್ದರು.

ಅನಿಲ್ ಆಂಟೋನಿಯವರು ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ. ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಯೋಜಿತ ಚಾನೆಲ್ ಬಿಬಿಸಿ ಎಂದು ಅವರು ಟೀಕಿಸಿದ್ದರು.

ಗಾಂಧಿ ಕುಟುಂಬವನ್ನು ಹೆಸರಿಸದೆ ಟೀಕೆಗಳನ್ನು ಮಾಡಿದ್ದ ಅನಿಲ್ ಆಂಟನಿ, “ಅನೇಕ ಕಾಂಗ್ರೆಸ್ ನಾಯಕರು ಅವರಿಗಾಗಿ ಕೆಲಸ ಮಾಡುವುದು ತಮ್ಮ ಕರ್ತವ್ಯ ಎಂದು ನಂಬುತ್ತಾರೆ” ಎಂದು ಆರೋಪಿಸಿದ್ದರು.

“ಜನರಿಗಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸ್ಪಷ್ಟ ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ” ಎಂದು ಬಣ್ಣಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...