ಬೋಯಿಂಗ್ 787-8 ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ.
ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ.
ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ ಇಬ್ಬರು ಪೈಲಟ್‌ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು.
ವಿಜಯ್ ರೂಪಾನಿ ಸೀಟ್ ಸಂಖ್ಯೆ 2-ಡಿಯಲ್ಲಿ ಕುಳಿತಿದ್ದರು. ಟಿಕೆಟ್ ದೃಢೀಕರಿಸಲಾಗಿದೆ. ವಿಜಯ್ ರೂಪಾನಿ ಅವರ ಪತ್ನಿ ಬ್ರಿಟನ್‌ನಲ್ಲಿದ್ದರು. ಅವರ ಪತ್ನಿ 6 ತಿಂಗಳು ಅಲ್ಲಿದ್ದರು. ಅವರನ್ನು ಮರಳಿ ಕರೆತರಲು ವಿಜಯ್ ರೂಪಾನಿ ಲಂಡನ್‌ಗೆ ಹೋಗುತ್ತಿದ್ದರು.
1956ರಲ್ಲಿ ಇಂದಿನ ಮೈನ್ಮಾರ್ ದೇಶದ ರಂಗೂನ್ನಲ್ಲಿ ಜೈನ್ ಬನಿಯಾ ಸಮುದಾಯದಲ್ಲಿ ಜನಿಸಿದ ವಿಜಯ್ ರೂಪಾನಿ ಅವರ ಕುಟುಂಬ ಮುಂದೆ ಗುಜರಾತಿನ ರಾಜ್ಕೋಟ್ಗೆ ವಲಸೆ ಬಂತು. ಬಿಎ ಎಲ್ಎಲ್ಬಿ ಪದವೀಧರರು. ಅವರ ತಂದೆ ರಮಣಿಕ್ಲಾಲ್ ರೂಪಾನಿ ತಾಯಿ ಮಾಯಾಬೆನ್. ವಿದ್ಯಾರ್ಥಿ ಜೀವನದಿಂದಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಕ್ರಿಯ ಸದಸ್ಯರಾಗಿ ಕೆಲಸ ಮಾಡಿದ ಅವರು, ಇಸವಿ ಸನ್ 1971ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
1976ರಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧ ನಡೆಸಿದ ಹೋರಾಟ ಅವರಿಗೆ 11 ತಿಂಗಳ ಜೈಲುವಾಸದ ರುಚಿಯನ್ನೂ ಉಣಬಡಿಸಿತು. 1978ರಿಂದ 1981ರವರೆಗೆ RSS ಪ್ರಚಾರಕ್ ಜವಾಬ್ದಾರಿಯನ್ನು ನಿರ್ವಹಿಸಿದ ವಿಜಯ್ ರೂಪಾನಿಗೆ 2006ರಲ್ಲಿ ಗುಜರಾತ್ ಪ್ರವಾಸೋದ್ಯಮ ಅಭಿವೃದ್ಧಿಯ ಜವಾಬ್ದಾರಿಯನ್ನೂ ಬಿಜೆಪಿ ನೀಡಿತು.
2006ರಲ್ಲಿ ರಾಜ್ಕೋಟ್ ಪಾಲಿಕೆ ಕಾರ್ಪೋರೇಟರ್, ಮೇಯರ್ ಆಗಿ ಆಯ್ಎಕಯಾದ ಅವರಿಗೆ ಬಿಜೆಪಿ ರಾಜ್ಯಸಭೆಯ ಸದಸ್ಯ ಸ್ಥಾನವನ್ನು ನೀಡಿತು.
ಈ ಬೋಯಿಂಗ್ 787-8 ವಿಮಾನವು 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ದಿತ್ತು. ಈ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು.
ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಕಾರ, ಏರ್ ಇಂಡಿಯಾ ಫ್ಲೈಟ್ AI 171 ಲಂಡನ್‌ಗೆ ತೆರಳುತ್ತಿತ್ತು. “ಜೂನ್ 12, 2025 ರಂದು, ಅಹಮದಾಬಾದ್‌ನಿಂದ ಗ್ಯಾಟ್ವಿಕ್‌ಗೆ AI-171 ವಿಮಾನವನ್ನು ಚಲಾಯಿಸುತ್ತಿದ್ದ ಮೆಸರ್ಸ್ ಏರ್ ಇಂಡಿಯಾ B787 ವಿಮಾನ VT-ANB, ಅಹಮದಾಬಾದ್‌ನಿಂದ ಟೇಕ್ ಆಫ್ ಆದ ತಕ್ಷಣ ಅಪಘಾತಕ್ಕೀಡಾಯಿತು.
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಘಟನೆ “ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ” ಎಂದು ಹೇಳಿದರು.
ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಎಸ್‌ವಿಪಿಐಎ) ಮುಂದಿನ ಸೂಚನೆ ಬರುವವರೆಗೆ ಮುಚ್ಚಲಾಗಿದೆ. ವಿಮಾನ ಟೇಕ್ ಆಫ್‌ಗೆ ಅನುಮತಿ ಪಡೆದ ಸುಮಾರು ಒಂಬತ್ತು ನಿಮಿಷಗಳ ನಂತರ ಅಪಘಾತ ಸಂಭವಿಸಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳ ಪ್ರಕಾರ, ದಟ್ಟವಾದ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಸವಾಲನ್ನು ಒಡ್ಡಿದೆ, ಅದು ಇನ್ನೂ ನಡೆಯುತ್ತಿದೆ.
ಏರ್ ಇಂಡಿಯಾ ಏನು ಹೇಳಿದೆ?: “ಅಹಮದಾಬಾದ್-ಲಂಡನ್ ಗ್ಯಾಟ್ವಿಕ್ ವಿಮಾನ AI171 ಇಂದು ಒಂದು ಘಟನೆಯಲ್ಲಿ ಭಾಗಿಯಾಗಿದೆ. ಈ ಕ್ಷಣದಲ್ಲಿ, ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ” ಎಂದು ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನೀಡಲು ಏರ್ ಇಂಡಿಯಾ 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದೆ.
ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ


