Homeಕರ್ನಾಟಕರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

'ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ'

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಜೊತೆಗೆ ಆದೇಶವನ್ನು ವಾಪಸ್ ಪಡೆಯುವವರೆಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಯಾವುದೇ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪತ್ರದ ವಿವರ ಹೀಗಿದೆ: 

ರಾಷ್ಟ್ರೀಯ ಶಿಕ್ಷಣ ನೀತಿ-202 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ..? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ..?
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆ ಮಾಡಬಯಸಿದರೆ, ಕೂಡಲೆ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೇ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...