Homeಕರ್ನಾಟಕಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಅಸಹಜ ಸಾವು

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಅಸಹಜ ಸಾವು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಅಸಹಜವಾಗಿ ಬೆಂಗಳೂರಿನಲ್ಲಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ (30) ಅಸಹಜವಾಗಿ ಸಾವಿಗೀಡಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ತರಲಾಗಿದೆ.

2018ರಲ್ಲಿ ವೈದ್ಯ ಡಾ. ನೀರಜ್‌ ಅವರನ್ನು ಸೌಂದರ್ಯ ವಿವಾಹವಾಗಿದ್ದರು. ಡಾ.ನೀರಜ್‌ ಹಾಗೂ ಸೌಂದರ್ಯ ದಂಪತಿಗೆ ಒಂದು ಮಗೂ ಇದೆ. ಗಂಡ ಹೆಂಡತಿ ಇಬ್ಬರೂ ವೈದ್ಯರಾಗಿದ್ದಾರೆ.

ನೀರಜ್ ಅವರು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಆ ಸಮಯದಲ್ಲಿ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಸೌಂದರ್ಯ ಅವರು ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಅವರ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಗಳಾಗಿವೆ.

ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಸುದ್ದಿ ಕೇಳಿಬರುತ್ತಿದ್ದಂತೆ ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಬಂದಿದ್ದಾರೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿರಿ: ಗಡಿಯಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...