Homeಮುಖಪುಟಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸಲಿರುವ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್

ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸಲಿರುವ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್

- Advertisement -
- Advertisement -

ಹಿರಿಯ ರಾಜಕಾರಣಿ ಗುಲಾಂ ನಬಿ ಅಜಾದ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ ತಮ್ಮ ತವರು ರಾಜ್ಯವಾದ ಜಮ್ಮು ಕಾಶ್ಮೀರದಲ್ಲಿ ತಮ್ಮದೇ ಆದ ಪಕ್ಷವನ್ನು ರಚಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಬಿಜೆಪಿಗೆ ಸೇರುತ್ತಿರುವ ಊಹಾಪೋಹಗಳನ್ನು ಗುಲಾಂ ನಬಿ ತಳ್ಳಿಹಾಕಿದ್ದಾರೆ.

“ನಾನು ಜಮ್ಮು ಕಾಶ್ಮೀರಕ್ಕೆ ಹೋಗುತ್ತೇನೆ. ನಾನು ರಾಜ್ಯದಲ್ಲಿ ನನ್ನದೇ ಆದ ಪಕ್ಷವನ್ನು ರಚಿಸುತ್ತೇನೆ, ನಂತರ ರಾಷ್ಟ್ರೀಯ ರಾಜಕಾರಣದ ಸಾಧ್ಯತೆಯನ್ನು ಪರಿಶೀಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಂ ನಬಿ ಅವರು ಶುಕ್ರವಾರ ತನ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಕಾಂಗ್ರೆಸ್‌ನ ಹಲವಾರು ಪ್ರಮುಖ ನಾಯಕರು ಪಕ್ಷಕ್ಕೆ ವಿದಾಯ ಹೇಳುತ್ತಿದ್ದು, ಗುಲಾಂ ನಬಿ ಅವರು ನಿರ್ಗಮನ ಮತ್ತೊಂದು ಹೊಡೆತ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ ಐದು ಪುಟಗಳ ಪತ್ರದಲ್ಲಿ, ಗುಲಾಂ ನಬಿ ಅವರು ತಮ್ಮ ನಿರ್ಗಮನಕ್ಕೆ ಪಕ್ಷದಲ್ಲಿನ ಹಿರಿಯ ನಾಯಕರನ್ನು ದೂರವಿಡುವುದು ಮತ್ತು ಪಕ್ಷದಲ್ಲಿ ಬೆಳೆಯುತ್ತಿರುವ ಪಕ್ಷಪಾತವನ್ನು ದೂಷಿಸಿದ್ದಾರೆ. ಪತ್ರದಲ್ಲಿ ಅವರು ರಾಹುಲ್ ಗಾಂಧಿ ಅವರನ್ನು ‘ಅಪ್ರಬುದ್ಧ’ ಮತ್ತು ‘ಗಂಭೀರವಲ್ಲದ ವ್ಯಕ್ತಿ’ ಎಂದು ಕರೆದಿದ್ದಾರೆ.

ಗಾಂಧೀ ಕುಟುಂಬದ ವಿರುದ್ಧದ ಅವರ ವಾಗ್ದಾಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗುಲಾಂ ನಬಿ ಅವರು, “ನಾನು ವೈಯಕ್ತಿಕ ಮಟ್ಟದಲ್ಲಿ ಇಡೀ ಗಾಂಧಿ ಕುಟುಂಬದ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಇಲ್ಲಿ ನಾನು ವೈಯಕ್ತಿಕ ಸಂಬಂಧದ ಬಗ್ಗೆ ಮಾತನಾಡುತ್ತಿಲ್ಲ. ನಾನು ಕಾಂಗ್ರೆಸ್ ಪತನದ ಬಗ್ಗೆ ಮಾತನಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋಳ ಮುಗಿಯದ ವನವಾಸ ಮತ್ತು ಸಂಸ್ಕಾರವಂತ ಅತ್ಯಾಚಾರಿಗಳು

ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಕಾಂಗ್ರೆಸ್ ಅನ್ನು “ಸಮಗ್ರವಾಗಿ ನಾಶಪಡಿಸಲಾಗಿದೆ” ಎಂದು ಬಣ್ಣಿಸಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷವು ತನಗೆ ಲಭ್ಯವಿರುವ ರಾಜಕೀಯ ಜಾಗವನ್ನು ಬಿಜೆಪಿಗೆ ಮತ್ತು ರಾಜ್ಯ ಮಟ್ಟದ ಜಾಗವನ್ನು ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...