ಹಿಮಾಚಲ ಪ್ರದೇಶದ ಬಿಲಾಸ್ಪುರದ ಮಾಜಿ ಕಾಂಗ್ರೆಸ್ ಶಾಸಕ ಬಂಬೇರ್ ಠಾಕೂರ್ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ದುಷ್ಕರ್ಮಿಗಳು ಬಂಬೇರ್ ಅವರ ಮನೆಯಲ್ಲೆ ಈ ಕೃತ್ಯ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ. ನಾಲ್ವರು ಅಪರಿಚಿತರಿಂದ
ದಾಳಿಯಲ್ಲಿ ಠಾಕೂರ್ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಸುಮಾರು 12 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ. ನಾಲ್ವರು ಅಪರಿಚಿತರಿಂದ
ಬಿಲಾಪ್ಸೂರ್‌ನಲ್ಲಿ ತಮ್ಮ ಪತ್ನಿಗೆ ನೀಡಲಾದ ಸರ್ಕಾರಿ ವಸತಿಗೃಹದ ಅಂಗಳದಲ್ಲಿ ಮಾಜಿ ಶಾಸಕ ಬಂಬೇರ್ ಠಾಕೂರ್ ಅವರು ಇತರರೊಂದಿಗೆ ಕುಳಿತಿದ್ದಾಗ ನಾಲ್ವರು ಬಂದು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ದುಷ್ಕರ್ಮಿಗಳ ಸ್ಪೋಟಿಸಿದ ಗುಂಡು ಠಾಕೂರ್ ಅವರ ಕಾಲಿಗೆ ತಗುಲಿದೆ ಎಂದು ವರದಿಯಾಗಿದೆ.
ಘಟನೆಯ ನಂತರ ದುಷ್ಕರ್ಮಿಗಳು ಮುಖ್ಯ ಮಾರುಕಟ್ಟೆಯ ಕಡೆಗೆ ಕಾಲ್ನಡಿಗೆಯಲ್ಲಿ ಓಡಿಹೋಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ಪತ್ತೆಗೆ ಶೋಧ ಆರಂಭಿಸಲಾಗಿದೆ ಎಂದು ಎಸ್ಪಿ ಸಂದೀಪ್ ಧವಲ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಸಂಬಂಧಿತ ಕಾನೂನು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ದಾಳಿ ನಡೆದ ತಕ್ಷಣ, ಠಾಕೂರ್ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು ಮತ್ತು ಪಿಎಸ್ಒ ಅವರನ್ನು ಬಿಲಾಸ್ಪುರದ ಏಮ್ಸ್‌ಗೆ ಕರೆದೊಯ್ಯಲಾಯಿತು.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, “ನಾನು ಬಂಬೇರ್ ಠಾಕೂರ್ ಅವರೊಂದಿಗೆ ಮಾತನಾಡಿದ್ದೇನೆ. ಅವರನ್ನು ಏಮ್ಸ್‌ಗೆ ಹೋಗುವಂತೆ ಒತ್ತಾಯಿಸಿದ್ದು, ಆದರೆ ಅವರು ಶಿಮ್ಲಾದಲ್ಲಿನ ಐಜಿಎಂಸಿಯಲ್ಲಿ ಚಿಕಿತ್ಸೆ ಪಡೆಯಲು ಬಯಸಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಉಪ ಆಯುಕ್ತರಿಗೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.
“ಗುಂಡಿನ ದಾಳಿಯ ಹಿಂದಿನ ಜನರನ್ನು ಬಂಧಿಸಲು ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಮತ್ತು ನಾಲ್ಕು ಪಥಗಳನ್ನು ನಿರ್ಮಿಸಲು ನಿರ್ದೇಶನಗಳನ್ನು ನೀಡಲಾಗಿದೆ” ಎಂದು ಸಿಎಂ ಸುಖು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ
ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ

