Homeಕರ್ನಾಟಕಮಾಜಿ ಸಿಪಿಐ(ಎಂ) ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ನಿಧನ

ಮಾಜಿ ಸಿಪಿಐ(ಎಂ) ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ನಿಧನ

- Advertisement -
- Advertisement -

ಕೊಲಾರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಮಾಜಿ ಸಿಪಿಐ(ಎಂ) ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದ ಹಿನ್ನೆಲೆಯಲ್ಲಿ ಅವರನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಹಲವು ಜನಪರ ಹೋರಾಟಗಳಿಗೆ ನೇತೃತ್ವ ನೀಡಿದ್ದ ಶ್ರೀರಾಮ ರೆಡ್ಡಿ ಅವರು ಬಾಗೇಪಲ್ಲಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವಿವಾಹಿತರಾಗಿದ್ದ ಅವರು ನಿಧನದವರೆಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. 2018 ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು 51,697 ಮತಗಳನ್ನು ಪಡೆದು ಸೋಲುಂಡಿದ್ದರು.

ತನ್ನ ಮಾಜಿ ಶಾಸಕನ ನಿಧನಕ್ಕೆ ಸಿಪಿಐಎಂ ರಾಜ್ಯ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

2020 ರ ಜೂನ್‌ನಲ್ಲಿ ಪಕ್ಷದ ತತ್ವ ಸಿದ್ದಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಪಿಐಎಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿತ್ತು. ಆದರೆ ಪಕ್ಷದ ಮೇಲೆ ಅತೀವ ಒಲವು ಹೊಂದಿದ್ದ ಅವರು, ಐದು ತಿಂಗಳ ಹಿಂದೆಯಷ್ಟೆ ಮತ್ತೆ ತನ್ನನ್ನು ಪಕ್ಷಕ್ಕೆ ತೆಗೆದುಕೊಳ್ಳಬೇಕು ಎಂದು ಪಕ್ಷದ ಕೇಂದ್ರ ಸಮಿತಿಗೆ ಪತ್ರ ಬರೆದಿದ್ದರು. ಈ ಪತ್ರವು ಪರಿಶೀಲನೆಯಲ್ಲಿತ್ತು ಎಂದು ಪಕ್ಷ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀರಾಮ ರೆಡ್ಡಿ ಅವರು ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಅವರು, “ಸಿಪಿಎಂ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ‌ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿಯವರು ಇತ್ತೀಚಿನ ವರ್ಷಗಳಲ್ಲಿ‌ ಕೋಮುವಾದದ ವಿರುದ್ದದ ಗಟ್ಟಿದನಿಯಾಗಿದ್ದರು.” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಸಂಘಟನೆಗೆ ಪ್ರಯತ್ನ ನಡೆಸುತ್ತಿದ್ದ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ರಾಜ್ಯ ಒಬ್ಬ ಧೀಮಂತ ಹೋರಾಟಗಾರನನ್ನು ಮತ್ತು ವೈಯಕ್ತಿಕವಾಗಿ ನಾನು ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ಸದಸ್ಯರ‌ ಮತ್ತು ಅನುಯಾಯಿಗಳ‌ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...