ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ! | Naanu gauri
PC: TheGoan.net

ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಂಗಳವಾರ ತಮ್ಮ ಪಕ್ಷದ ಬೆಂಬಲವನ್ನು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಔಪಚಾರಿಕವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರವು “ಗೋವನ್‌‌ ವಿರೋಧಿ” ನೀತಿಗಳನ್ನು ಅನುಸರಿಸುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ ನಮ್ಮ ಸಂಬಂಧವು ಜುಲೈ 2019 ರಲ್ಲಿ ಕೊನೆಗೊಂಡಿತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಮರುಪರಿಶೀಲನೆಗೆ ಅವಕಾಶವಿಲ್ಲ. ಆದ್ದರಿಂದ, ನಮ್ಮ ಪ್ರಜಾಪ್ರಭುತ್ವ ಬದ್ಧತೆಗಳು ಮತ್ತು ಗೋವಾ ಜನರ ಇಚ್ಛೆಗೆ ಅನುಗುಣವಾಗಿ ನಾವು ಎನ್‌ಡಿಎಯ ಭಾಗವಾಗಿರುವುದನ್ನು ಕೊನೆಗೊಳಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಈ ಹಿಂದೆ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರ್ದೇಸಾಯಿ, ಪಕ್ಷದ ಕಾರ್ಯಕಾರಿ ಸಮಿತಿಯು ಮಂಗಳವಾರ ನಿರ್ಣಯವನ್ನು ಅಂಗೀಕರಿಸಿದ ನಂತರ ಪಕ್ಷದ ನಿರ್ಧಾರವನ್ನು ಪ್ರಕಟಿಸಿತು.

ಮುಂದೆ ನಡೆಯಲಿರುವ ಮಾರ್ಗಾವೊ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲು ಜಿಎಫ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೊತೆಗೆ ರಾಜ್ಯದ ಐದು ಮುನ್ಸಿಪಲ್ ಕೌನ್ಸಿಲ್ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಇದು ಬಹಳ ಹೊಡೆತ ನೀಡಲಿದೆ ಎನ್ನಲಾಗಿದೆ. 2022 ರಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

“ನಾವು ಮೊದಲು ಪರ್ಯಾಯ ಮೈತ್ರಿಯನ್ನು ರೂಪಿಸುವ ಯೋಜನೆಯನ್ನು ಹೊಂದಿದ್ದೇವೆ. ಈಗ ನಾವು ಮಾರ್ಗಾವೊದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ದಿಗಂಬರ್ ಕಾಮಂತ್ ಅವರ ನೇತೃತ್ವದ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದಕ್ಕೆ ನಾವು ಮಾರ್ಗಾವೊ ಸಿವಿಲ್ ಅಲೈಯನ್ಸ್ ಎಂದು ಹೆಸರಿಟ್ಟೀದ್ದೇವೆ. ಈ ಮೈತ್ರಿಯನ್ನು ನಾಗರಿಕ ಸಮಾಜ ಗುಂಪುಗಳು ಅನುಮೋದಿಸಿವೆ, ಅವರೆಲ್ಲರು ನಾನು ಎನ್‌ಡಿಎಯ ಭಾಗವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

“ಬಿಜೆಪಿ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳುವಿಕೆಗೆ ಇದು ಒಂದು ಎಡವಟ್ಟು ಎಂದು ಅವರು ಭಾವಿಸುತ್ತಾರೆ. ಅವರ ಅಭಿಪ್ರಾಯಗಳನ್ನು ಗೌರವಿಸಿ, ನಾವು ಹೊರಬರಲು ನಿರ್ಧರಿಸಿದ್ದೇವೆ. 2022 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಯಸುವ ಪಕ್ಷಗಳ ಒಕ್ಕೂಟವಾದ ‘ಟೀಮ್ ಗೋವಾ’ ಕಲ್ಪನೆಯನ್ನು ನಾನು ಸಮರ್ಥಿಸುತ್ತಿದ್ದೇನೆ” ಎಂದು ಸರ್ದೇಸಾಯಿ ತಿಳಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರದ ಪ್ರಬಲ ವಿಮರ್ಶಕರಲ್ಲಿ ಒಬ್ಬರಾಗಿರುವ ಸರ್ದೇಸಾಯಿ ಅವರು ಪ್ರಾಯೋಗಿಕವಾಗಿ ಇನ್ನು ಮುಂದೆ ತಾವು ಎನ್‌ಡಿಎ ಸದಸ್ಯರಲ್ಲ ಎಂದು ಹೇಳಿದ್ದಾರೆ.

“ಕಳೆದ ಎರಡು ವರ್ಷಗಳಲ್ಲಿ, ಭಗವಾನ್ ಮಹಾವೀರ್ ಅಭಯಾರಣ್ಯ ಮತ್ತು ಮೊಲೆಮ್ ರಾಷ್ಟ್ರೀಯ ಉದ್ಯಾನವನದ ಹಗಲುದರೋಡೆಗೆ ಗೋವಾನ್ನರು ಸಾಕ್ಷಿಯಾಗಿದ್ದಾರೆ. ಇದನ್ನು ಗೋವಾವನ್ನು ಕಲ್ಲಿದ್ದಲು ಕೇಂದ್ರವನ್ನಾಗಿ ಮಾಡಲು ಆಶಿಸುವ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ನಮ್ಮ ಮಹಾದಾಯಿ ನದಿಯನ್ನು ತಿರುಗಿಸುವ ಬಗ್ಗೆ ಮುಖ್ಯಮಂತ್ರಿ ಸಾವಂತ್‌ ಅವರ ಕ್ಷಮಿಸಲಾಗದ ನಿರ್ಲಕ್ಷ್ಯ ಮತ್ತು ಆಘಾತಕಾರಿ ನಿಷ್ಕ್ರಿಯತೆಯನ್ನು ಗೋವಾ ಕಂಡಿದೆ” ಎಂದು ಸರ್ದೇಸಾಯಿ ಹೇಳಿದ್ದಾರೆ.

ಮಾರ್ಚ್ 2019 ರಲ್ಲಿ ಪರಿಕ್ಕರ್ ಅವರ ಮರಣದ ನಂತರ ಸರ್ದೇಸಾಯಿ ಉಪಮುಖ್ಯಮಂತ್ರಿಯಾಗಿ ಅಲ್ಪಾವಧಿಗೆ ಸೇವೆ ಸಲ್ಲಿಸಿದರು. ನಂತರ ಅವರನ್ನು ಸಾವಂತ್ ನೇತೃತ್ವದ ಸರ್ಕಾರ ಉಚ್ಛಾಟಿಸಿತು.


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here